ಮುಖ್ಯಪೇದೆ ವಿ.ರಾಮದಾಸ್‍ಗೆ ಕನ್ನಡ ಸೇವಾರತ್ನ ಪ್ರಶಸ್ತಿ

ಹನೂರು, ನ.10: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅನಿಕೇತನ ಕನ್ನಡ ಬಳಗ ಕೊಡಮಾಡಲಾಗುವ ಕನ್ನಡ ಸೇವಾರತ್ನ ಪ್ರಶಸ್ತಿಯನ್ನು ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಉಪ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ವಿ.ರಾಮದಾಸ್ ಅವರಿಗೆ ನೀಡಿ ಗೌರವಿಸಲಾಗಿದೆ.
ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಕ್ರೀಡೆ, ಮುಂತಾದ ಕ್ಷೇತ್ರಗಳ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅನಿಕೇತನ ಕನ್ನಡ ಬಳಗ ಪೊಲೀಸ್ ವೃತ್ತಿಯ ಜೊತೆಗೆ ಸಂಗೀತ ಕ್ಷೇತ್ರದಲ್ಲಿ ಗಾಯನದ ಮೂಲಕ ಸೇವೆ ಸಲ್ಲಿಸಿರುವುದನ್ನು ಮನಗಂಡು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಲಾಗಿದೆ.
ಮೈಸೂರಿನ ಕಲಾಮಂದಿರದಲ್ಲಿ ಈ ಒಂದು ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು, ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ.
ಹನೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಮದಾಸ್ ಅವರಿಗೆ ಸಂಗೀತ ಕ್ಷೇತ್ರದಲ್ಲಿ ಸನ್ಮಾನಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.