ಮುಖ್ಯಮಂತ್ರಿಗಳಿಂದ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಡಿಯೋ ಸಂವಾದ

ವಿಜಯಪುರ, ಏ.30-ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವಶ್ಯಕ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳು ಬರುವ ಮೇ 12 ರ ವರೆಗೆ ನಿಬರ್ಂಧ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೋವಿಡ್ ಪಾಸಿಟಿವ್ ರೋಗಿಗಳಿಗೆ ಆಕ್ಸಿಜನ್, ಬೆಡ್ ಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸ್ವ್ಯಾಬ್ ಪರೀಕ್ಷೆ ಅಗತ್ಯಕ್ಕೆ ತಕ್ಕಂತೆ ಪರೀಕ್ಷೆಗೆ ಒಳಪಡಿಸಬೇಕು. ಅವಶ್ಯಕ ಸಂದರ್ಭಗಳಲ್ಲಿ ವಸತಿ ನಿಲಯಗಳು, ಕಲ್ಯಾಣ ಮಂಟಪಗಳನ್ನು ಬೆಡ್ ಗಳಿಗಾಗಿ ಸಿದ್ಧತೆಯಲ್ಲಿ ಇಟ್ಟುಕೊಳ್ಳಬೇಕು. ಅನಾವಶ್ಯಕವಾಗಿ ರೆಮ್ ಡಿಸೀವರ್ ಲಸಿಕೆ ಬಳಕೆಯಾಗದಂತೆ ನಿಗಾ ಇಡಬೇಕು. ಗುಳೆ ಹೋಗಿ ಬಂದವರಿಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ದೊರಕಿಸಿಕೊಡಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಬೀಜ ಹಾಗೂ ಸಾವಯವ ಪ್ರಮಾಣದ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ್, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ.ರೆಡ್ಡಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.