ಮುಖ್ಯಮಂತ್ರಿಗಳಿಂದ ಬಸವ ಉತ್ಸವ – 2023 ರ ಲೋಗೊ ಬಿಡುಗಡೆ

ಬೀದರ. ಫೆ. 27 : ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವ – 2023 ರ ಲೋಗೊ ಮತ್ತು ಪೆÇೀಸ್ಟರಗಳನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಅವರು ರವಿವಾರ ಸಂಜೆ ಬೀದರ ವಾಯುಪಡೆಯ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು.
ಬಸವ ಉತ್ಸವದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳುವಂತೆ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿದ ಅವರು ಮಾರ್ಚ್ 12 ರಂದು ಬಸವ ಉತ್ಸವ – 2023 ರ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕುರಿತು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಸವಕಲ್ಯಾಣ ಶಾಸಕರಾದ ಶರಣು ಸಲಗರ. ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ. ಜಿಲ್ಲಾಧಿಕಾರಿ ಗೋವಿಂದರೆಡ್ಡಿ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸೂರ್ಯಕಾಂತ ನಾಗಮಾರಪಳ್ಳಿ. ಈಶ್ವರಸಿಂಗ್ ಠಾಕೂರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.