ಮುಖ್ಯಮಂತ್ರಿಗಳ ಪೂರ್ವಭಾವಿ ಸಭೆ : ವರದಿ ಸಲ್ಲಿಸಲು ಎಡಿಸಿ ಸೂಚನೆ

ರಾಯಚೂರು, ಸೆ.೦೭- ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಸೆ.೧೨ ಮತ್ತು ೧೩ ಸಭೆ ಕರೆದಿದ್ದು, ಜಿಲ್ಲೆಯ ಎಲ್ಲ ಇಲಾಖೆಗಳ ಅಭಿವೃದ್ಧಿ ಮತ್ತು ವಿಳಂಬಗೊಂಡ ಕಾಮಗಾರಿ ಸೇರಿದಂತೆ ಪ್ರಮುಖ ಸಮಸ್ಯೆಗಳ ಬಗ್ಗೆ ವರದಿ ಸಿದ್ದಪಡಿಸುವಂತೆ ಅಪಾರ ಜಿಲ್ಲಾಧಿಕಾರಿ ದುರುಗೇಶ್ ಕೆ. ಆರ್ ಅವರು ಸಂಬಂಧಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರಿಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಮುಖ್ಯಮಂತ್ರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಆರೋಗ್ಯ ಮತ್ತು ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಪ್ರಮುಖ ಸಮಸ್ಯೆಗಳ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.
ಜಿಲ್ಲೆಯ ಎಲ್ಲ ಇಲಾಖೆಗಳಲ್ಲಿ ವಿಳಂಬಗೊಂಡ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ದಲಿತರ ಮೇಲೆ ದೌರ್ಜನ್ಯ ಪ್ರಕರಣ ಬಗ್ಗೆ ವರದಿ ಸಿದ್ದಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಾನುವಾರ ದಂದು ಇಲಾಖೆ ಪ್ರಗತಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಅಟ್ರಾಸಿಟಿ ಪ್ರಕರಣ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರು ನಗರ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನ ಹರಿಸುವ ಸಾಧ್ಯತೆ. ಈ ನಿಟ್ಟಿನಲ್ಲಿ ನಗರದ ಸಮಸ್ಯೆ ಮತ್ತು ಅಭಿವೃದ್ಧಿ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು. ಬಸವ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ, ಇನ್ನಿತರ ಇಲಾಖೆಗಳ ಸಮಸ್ಯೆಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಪಿಯುಸಿ, ಪದವಿ ಕಾಲೇಜುಗಳಿಗೆ ನಿರ್ಮಾಣಕ್ಕೆ ಕಡಿಮೆ ದರದಲ್ಲಿ ನಿವೇಶನ ನೀಡುವ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು.
ಪ್ರಧಾನಿ ಮಂತ್ರಿ ಅವಾಸ ಯೋಜನೆ ಅನುಷ್ಠಾನ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಮಾನ್ವಿಯಲ್ಲಿ ಬಾಲಕೀಯರ ಪದವಿ ವಸತಿ ನಿಲಯಕ್ಕೆ ನಿವೇಶನ ಗುರುತು ಮಾಡುವಂತೆ ಸಲಹೆ ನೀಡಿದರು.ಪಿಎಂ ಕಿಸಾನ್ ಯೋಜನೆ ಪ್ರಗತಿ ಸಲ್ಲಿಸುವಂತೆ ಸೂಚನೆ ನೀಡಿದರು.
ರಸಗೊಬ್ಬರ ಕೊರೆತೆ ಆಗದಂತೆ ನೋಡಿಕೊಳ್ಳಬೇಕು.
ಬೆಳೆ ವಿಮೆ ರೈತರ ಅರ್ಜಿ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹೇಶ ಪುತ್ತೇದಾರ, ಯುವ ಸಬಲೀಕರಣ ಅಧಿಕಾರಿ, ಆರೋಗ್ಯ ಇಲಾಖೆ, ಮಂಗಳ ನಾಯಕ, ಕೃಷಿ ಅಧಿಕಾರಿ ದೇವಿಕಾ, ಸೇರಿದಂತೆ ಜಿಲ್ಲೆಯ ವಿವಿಧ ಅಧಿಕಾರಿಗಳು ಇದ್ದರು.