ಮುಖ್ಯಮಂತ್ರಿಯವರ ಸಲಹೆಗಾರರ ಪ್ರವಾಸ

ಕಲಬುರಗಿ:ಜ.11:ಮುಖ್ಯಮಂತ್ರಿಯವರ ಸಲಹೆಗಾರರು ಹಾಗೂ ಆಳಂದ ಶಾಸಕರಾದ ಬಿ.ಆರ್. ಪಾಟೀಲ್ ಅವರು ಜನವರಿ 12 ರಂದು ಶುಕ್ರವಾರ ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಟಾಸ್ಕ್‍ಫೋರ್ಸ್ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ಸಿಂಧನೂರಿಗೆ ಪ್ರಯಾಣಿಸಿ ವಾಸ್ತವ್ಯ ಮಾಡುವರು.

ಜನವರಿ 13 ರಂದು ಶನಿವಾರ ರಾತ್ರಿ 1 ಗಂಟೆಗೆ ಬಳ್ಳಾರಿಯಿಂದ  ಕಲಬುರರಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜನವರಿ 14 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು. 
ಜನವರಿ 15 ರಂದು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಆಳಂದ ತಹಶೀಲ್ದಾರರ ಕಚೇರಿಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. 
ಜನವರಿ 16 ರಂದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಲಯದ ಬಾರ್ ಕೌನ್ಸಿಲ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. 
  ಅಂದು ಸಂಜೆ 5 ಗಂಟೆಗೆ ಕಲಬುರಗಿ ಸುಪರ ಮಾರ್ಕೇಟ್‍ದಲ್ಲಿನ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್‍ದಲ್ಲಿ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ವತಿಯಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.