ಮುಖ್ಯಮಂತ್ರಿಯಿಂದ ನಾಡ ದೇವಿಗೆ ವಿಶೇಷ ಪೂಜೆ

ಮೈಸೂರು, ಜ.11:- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ದೇವಿಯ ದರ್ಶನ ಪಡೆದರು.
ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಮಾಡಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ನಾಡಿನ ದೊರೆಯನ್ನು ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಬಿಎಸ್‍ವೈ ಅವರಿಗೆ ಪೂರ್ಣ ಕುಂಭ ಸ್ವಾಗತಿಸಿ
ಹಾರ ಹಾಕಿ ತಿಲಕವಿಟ್ಟು ಆತ್ಮೀಯವಾಗಿ ಬರಮಾಡಿಕೊಂಡು ಮಹಾ ಮಂಗಳಾರತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಸಚಿವ ಸೋಮಶೇಖರ್, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಸೇರಿದಂತೆ ಸ್ಥಳೀಯ ಶಾಸಕರು ಹಾಗೂ ಬಿಜೆಪಿ ಮುಖಂಡರು ಸಾಥ್ ನೀಡಿದರು.