ಮುಖ್ಯರಸ್ತೆಗಳಲ್ಲಿ ಸ್ಪೀಡ್ ಬ್ರೇಕ್ ಅಳವಡಿಸಲು ಜಯ ಕರ್ನಾಟಕ ರಕ್ಷಣಾ ಸೇನೆ ಒತ್ತಾಯ

ರಾಯಚೂರು,ನ.೨೫- ರಸ್ತೆ ಅಪಘಾತಗಳನ್ನು ತಪ್ಪಿಸಲು ನಗರದ ಮುಖ್ಯ ರಸ್ತೆಗಳಲ್ಲಿ ಸ್ಪೀಡ್ ಬ್ರೇಕರ್ ಗಳನ್ನು ಅಳವಡಿಸಬೇಕೆಂದುವತಾಯಿಸಿ ಜೈ ಕರ್ನಾಟಕ ರಕ್ಷಣಾ ಸೇನೆ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ನಗರದ ರಸ್ತೆಗಳು ತುಂಬಾ ಜನದಟ್ಟಣೆಯಿಂದ ಕೂಡಿದ್ದು, ವಾಹನಗಳ ದಿನದಿನೇ ಸಂಚಾರ ಅಧಿಕವಾಗುತ್ತಾ ಹೋಗುತ್ತದೆ. ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ವೇಗ ಮಿತಿಮೀರಿ ಹೋಗುತ್ತಿದ್ದು, ಇದರಿಂದ ಅಮಾಯಕರ ಜೀವಿಗಳ ಅಪಘಾತಕ್ಕೆ ಬಲಿಯಾಗುತ್ತಿದೆ ಎಂದು ದೂರಿದರು.
ಇಲ್ಲ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹವನ್ನು ಸಂಚರಿಸುವಂತೆ
ಸಂಚಾರಿ ಪೊಲೀಸ್ ಠಾಣೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಬೇಕು. ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಸರಿಯಾದ ಮಾರ್ಗದಲ್ಲಿ ಚಲಿಸುವಂತೆ ಕ್ರಮ ವಹಿಸಬೇಕು.ನಗರದ ಎಲ್ಲಾ ರಸ್ತೆಗಳಲ್ಲಿ ಸ್ಪೀಡ್ ಬ್ರೇಕರ್ ಗಳನ್ನು ಅಳವಡಿಸಲು ಸಂಬಂಧಪಟ್ಟ ಇಲಾಖೆಯವರಿಗೆ ಸೂಚನೆ ನೀಡಬೇಕು. ಒಂದು ವಾರದಲ್ಲಿ ಕ್ರಮ ಕೈಗೊಳ್ಳದೆ ಇದ್ದರೆ ಪಕ್ಷದ ವತಿಯಿಂದ ರಸ್ತೆ ರೋಕೊ ಚಳುವಳಿಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾಘವೇಂದ್ರ, ಕೆ.ಮಲ್ಲೇಶ್,ಗಂಗಾಧರ್,ನಲ್ಲರೆಡ್ಡಿ,ಸತ್ಯರಾಜ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.