ಮುಖ್ಯಶಿಕ್ಷಕರು ಪ್ರತಿಶತ ಫಲಿತಾಂಶದ ಗುರಿ ಹೊಂದಬೇಕು : ಸಲೀಂ ಪಾಷಾ

???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಭಾಲ್ಕಿ:ಜ.13: ಪ್ರೌಢಶಾಲೆಗಳ ಎಲ್ಲಾ ಮುಖ್ಯ ಶಿಕ್ಷಕರು ತಮ್ಮ ತಮ್ಮ ಶಾಲೆಯ ಪ್ರತಿಶತ ಫಲಿತಾಂಶದ ಗುರಿ ಹೊಂದಿರಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಲೀಂ ಪಾಷಾ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ, 2023ರ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ, ಜಿ.ಪಂ.ಬೀದರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ನಡೆದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲಾ ಮುಖ್ಯಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರು ಮೊದಲಿಗೆ ನಾನಿದನು ಮಾಡುತ್ತೇನೆ ಎನ್ನುವ ಸಕಾರಾತ್ಮಕ ವಿಚಾರದೊಂದಿಗೆ ತಮ್ಮ ತಮ್ಮ ಶಾಲೆಯ ಪ್ರತಿ ಶತ ಫಲಿತಾಂಶದ ಗುರಿಯತ್ತ ಸಾಗಬೇಕು. ಈ ನಿಟ್ಟಿನಲ್ಲಿ ಈಗಾಗಲೆ ತಾವು ಮಾಡುತ್ತಿರುವ ಎಲ್ಲಾ ಚಟುವಟಿಕೆಗಳೊಂದಿಗೆ ನಿಧಾನ ಕಲಿಕಾ ವಿದ್ಯಾರ್ಥಿಗಳು, ಮತ್ತು ಫಾಸ್ಟ್ ಲರ್ನರ್ ವಿದ್ಯಾರ್ಥಿಗಳ ಗುಂಪು ಮಾಡಿ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗುವಂತೆ ಸಹಕರಿಸಬೇಕು. ಮುಖ್ಯ ಶಿಕ್ಷಕರಾದವರು ಪ್ರತಿನಿತ್ಯ ಎಲ್ಲಾ ವಿಷಯಗಳ ಪ್ರಥಮ ಪಾಠದ ಮೇಲೆ ನಾಲ್ಕೈದು ಪ್ರಶ್ನೆಗಳು ವಿದ್ಯಾರ್ಥಿಗಳಿಗೆ ಕೇಳುವುದರೊಂದಿಗೆ ಅವರ ಕಲಿಕಾ ಮಟ್ಟ ಅರಿಯಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ, ತಾಲೂಕಿನಲ್ಲಿ ಒಟ್ಟು 4 ಮುರಾರ್ಜಿ ದೇಸಾಯಿ ಮತ್ತು ಕಿತ್ತೂರರಾಣಿ ಚನ್ನಮ್ಮ ವಸತಿ ಶಾಲೆಗಳು ಸೇರಿದಂತೆ 30 ಸರ್ಕಾರಿ ಪ್ರೌಢಶಾಲೆಗಳು, 19 ಅನುದಾನಿತ ಪ್ರೌಢಶಾಲೆಗಳು, 34 ಅನುದಾನ ರಹಿತ ಪ್ರೌಢಶಾಲೆಗಳಿವೆ. ಈ ಎಲ್ಲಾ ಶಾಲೆಯ 2023 ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ನಿಮಿತ್ಯ ಒಟ್ಟು 16 ಪರೀಖ್ಷಾ ಕೇಂದ್ರಗಳು ಆಯೋಜಿಸಲಾಗಿದ್ದು, ಇವುಗಳಲ್ಲಿ 5 ಪಟ್ಟಣದ ಪ್ರದೇಶದಲ್ಲಿದ್ದರೆ 11 ಕೇಂದ್ರಗಳು ಗ್ರಾಮೀಣ ಭಾಗದಲ್ಲಿವೆ. ಈ ವರ್ಷ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲಾಗುವುದು. ಹೀಗಾಗಿ ಎಲ್ಲಾ ಮುಖ್ಯಗುರುಗಳು ವಿದ್ಯಾರ್ಥಿಗಳ ವೈಯಕ್ತಿಕ ಪ್ರೊಪೈಲ್ ಮಾಡಿ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವ ಕಾರ್ಯಮಾಡಬೇಕು ಎಂದು ಹೇಳಿದರು. ಉಪನಿರ್ದೇಶಕ ಕಚೇರಿಯ ಜಿಲ್ಲಾ ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿ ಫುರಖಾನ ಪಾಶಾ ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷಾ ನೊಂದಣಿ ಮತ್ತು ತಿದ್ದುಪಡಿಗಳ ಬಗ್ಗೆ ಮಾಹಿತಿ ನೀಡಿದರು.

ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ ಓಂಕಾರ ರೊಗನ್, ಡಯಟ ಉಪನ್ಯಾಸಕ ದೇಶಮುಖ ಹಂಚೆ, ಎಸ್‍ಎಸ್‍ಕೆ ಎಪಿಸಿ ಗುಂಡಪ್ಪ ಹುಡಗೆ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಲ್ಲಿನಾಥ ಸಜ್ಜನ, ಬಿಇಓ ಕಚೇರಿಯ ವ್ಯವಸ್ಥಾಪಕ ಶಿವಕುಮಾರ ಉಪಸ್ಥಿತರಿದ್ದರು.

ಇದೇವೇಳೆ ಕೋಸಂ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮೇಶ ಮರೂರಕರ, ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ, ಸತ್ಯಸಾಯಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ನಿರ್ಮಲಾ ತಿವಾರಿ ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

ಸ್ಥಳೀಯ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ ಮೇತ್ರೆ ಸ್ವಾಗತಿಸಿದರು. ಇಸಿಓ ಸಹದೇವ.ಜಿ ನಿರೂಪಿಸಿದರು. ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಜೋಳದಪೆ ವಂದಿಸಿದರು.