ಮುಜರಾಯಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಊಡಿತುಂಬುವ ಕಾರ್ಯಕ್ರಮ


ಸಂಜೆವಾಣಿ ವಾರ್ತೆ
ಹೊಸಪೇಟೆ ಆ5: ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಶ್ರೀಮರಮಹಾಲಕ್ಷ್ಮೀ ವೃತ್ತದ ಪ್ರಯುಕ್ತ ನೀಡಿದ ಆದೇಶದಂತೆ ಮಹಿಳೆಯರಿಗೆ ಊಡಿ ತುಂಬಲಾಯಿತು ಎಂದು ಊರಮ್ಮದೇವಿ ದೇವಸ್ಥಾನದ ಕಾರ್ಯದರ್ಶಿ ವಿ.ಶಂಕ್ರಾಚಾರಿ ತಿಳಿಸಿದರು.
ಹಿಂದೂಗಳಿಗೆ ಅದರಲ್ಲೂ ಮುಖ್ಯವಾಗಿ ಮಹಿಳೆಯರಿಗೆ ಪವಿತ್ರ ಹಬ್ಬವಾದ ವರಮಹಾಲಕ್ಷ್ಮೀ ವೃತದ ಹಿನ್ನೆಲೆಯಲ್ಲಿ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮಾನ್ಯ ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಿದ್ದರು. 
ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಬಹಳ ಮಹತ್ವಪೂರ್ಣವಾದ ಸ್ಥಾನವನ್ನು ನೀಡಿ ಗೌರವಿಸಲಾಗುತ್ತದೆ. ಪ್ರತಿ ವರ್ಷ ಶ್ರೀ ವರಮಹಾಲಕ್ಷ್ಮಿ ವ್ರತ, ಸ್ವರ್ಣಗೌರಿ ವ್ರತ ಮತ್ತು ನವರಾತ್ರಿಗಳಲ್ಲೀಯೂ ಸಹ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಶ್ರೀ ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ”. ಸಂಪ್ರದಾಯಕ್ಕೆ ಮತ್ತಷ್ಟು ಇಂಬು ನೀಡುವ ಹಾಗೂ ರಾಜ್ಯದ ಮುಜರಾಯಿ ದೇವಸ್ಥಾನಗಳ ವತಿಯಿಂದ ಮಹಿಳೆಯರಿಗೆ ವಿಶೇಷವಾಗಿ ಮಂಗಳದ್ರವ್ಯಗಳನ್ನು ಹಾಗೂ ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕು ಎನ್ನುವ ಉದ್ದೇಶದಿಂದ ಇತ್ತೀಚಿಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಈ ಪ್ರಯುಕ್ತ ಹೊಸಪೇಟೆ ಊರಮ್ಮ ದೇವಿ ದೇವಸ್ಥಾನ, ವಡಕರಾಯಸ್ವಾಮಿ ದೇವಸ್ಥಾನ, ಹೊಸೂರಮ್ಮ ದೇವಿ ದೇವಸ್ಥಾನ, ಜಂಬೂನಾಥಸ್ವಾಮಿ ದೇವಸ್ಥಾನಗಳಲ್ಲಿ ಊಡಿತುಂಬುವ ಕಾರ್ಯ ಮಾಡಲಾಗಿದೆ. ಊರಮ್ಮ ದೇವಿ ದೇವಸ್ಥಾನದಲ್ಲಿ ಭಕ್ತಿರಿಗೆ ಊಡಿ ತುಂಬಲಾಯಿತು.

ಮರೆಯಾಗುತ್ತಿರುವ ಸಂಪ್ರದಾಯಗಳಿಗೆ ಜೀವನೀಡಬೇಕು, ಧರ್ಮದಿಂದಲೇ ಶಾಂತಿಯಂಬ ಸಂದೇಶದಂತೆ ಈ ವರ್ಷ ದೇವಸ್ಥಾನಗಳಲ್ಲಿ ಆಚರಣೆ ಮಾಡಲಾಗುತ್ತಿದೆ ಇದನ್ನು ನಿರಂತರವಾಗಿ ಮುಂದುವರೆಸಲಾಗುವುದು
ಶಶಿಕಲಾ ಜೊಲ್ಲೆ
ಮುಜರಾಯಿ, ಹಚ್ ಮತ್ತು ವಕ್ಭ್ ಖಾತೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರು.

Attachments area