ಮುರುಘಾಮಠಕ್ಕೆ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಭೇಟಿ

ಚಿತ್ರದುರ್ಗ.ಆ.4;  ಕಾಂಗ್ರೆಸ್ ಮುಖಂಡರಾದ  ಡಿ.ಕೆ. ಶಿವಕುಮಾರ್,  ಈಶ್ವರ ಖಂಡ್ರೆ ಮೊದಲಾದ ಕಾಂಗ್ರೆಸ್ ಮುಖಂಡರು  ಮುರುಘಾಮಠದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಭೇಟಿ ಮಾಡಿ ಶ್ರೀಗಳ ಸಮಾಜಮುಖಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಹಾಗೆಯೇ ರಾಹುಲ್ ಗಾಂಧಿಯವರು  ಶ್ರೀ ಮುರುಘಾಮಠಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಶ್ರೀಗಳನ್ನು ಭೇಟಿಯಾಗುವ ಸ್ಥಳ ಪರಿಶೀಲನೆ ಮಾಡಿ ಪೂರ್ವ ತಯಾರಿ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶ್ರೀಗಳು ಶ್ರೀಮಠದ ಜೊತೆ ಮತ್ತೆ ಯಾರನ್ನು ಭೇಟಿ ಮಾಡಲಿದ್ದಾರೆ ಎಂಬ ಅಂಶವನ್ನು ಡಿ.ಕೆ. ಶಿವಕುಮಾರ್ ಅವರ ಜೊತೆ ಮಾತನಾಡಿದಾಗ, ಉತ್ತರಿಸಿದ ಅವರು ಇಲ್ಲಿಂದ ನೇರವಾಗಿ ದಾವಣಗೆರೆ ಕಾರ್ಯಕ್ರಮಕ್ಕೆ ತೆರಳುತ್ತಾರೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಶ್ರೀಗಳು, ನಮ್ಮದೆ ಸಮಾಜದ ಮಠವಾದ ಸಿರಿಗೆರೆ ತರಳಬಾಳು ಮಠಕ್ಕೆ ಭೇಟಿ ನೀಡಬಹುದು ಎಂಬ ಮಾತನ್ನು ವ್ಯಕ್ತಪಡಿಸಿದರು. ಅದಕ್ಕೆ ಶಿವಕುಮಾರ್ ಅವರು ಮುಂದಿನ ದಿನಗಳಲ್ಲಿ ಜೋಡೋ ಭಾರತ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮ ಆಗಮಿಸಿದಾಗ ಸಿರಿಗೆರೆ ಮಠಕ್ಕೆ ಭೇಟಿ ನೀಡುತ್ತಾರೆ ಎಂದು ತಿಳಿಸಿದರು.