ಮುರುಘಾಮಠಕ್ಕೆ ಭೇಟಿ

ಚಿತ್ರದುರ್ಗ, ಅ. 27 – ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ  ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪ್ರಧಾನ ಕಾರ‍್ಯದರ್ಶಿ ಮಂಜುನಾಥ್ ಪ್ರಸಾದ್ ಅವರು ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶರಣಸೇನೆ ಜಿಲ್ಲಾಧ್ಯಕ್ಷ ಮರುಳಾರಾಧ್ಯ ಇದ್ದರು.