ಮುರ್ಮು ಮುಖ ಲಕ್ಷಣ ಅವಮಾನ ವ್ಯಾಪಕ ಟೀಕೆ

ನವದೆಹಲಿ,ನ.೧೨- ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಖ ಲಕ್ಷಣದ ಬಗ್ಗೆ ಪಶ್ಚಿಮ ಬಂಗಾಳದ ಸಚಿವ ಅಖಿಲ್ ಗಿರಿ ಅವಮಾನಿಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ನಂದಿಗ್ರಾಮ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುವ ಸಮಯದಲ್ಲಿ ಸಚಿವ ಗಿರಿ, ರಾಷ್ಟ್ರಪತಿ ದ್ರೌಪದಿ ಮುರ್ಮ ಅವರ ಬಣ್ಣದ ಕುರಿತು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಚಿವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ವ್ಯಕ್ತವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಅಖಿಲ್ ಗಿರಿ ತೃಣಮೂಲ ಪಕ್ಷ ಜನರನ್ನು ಅವರ ನೋಟದಿಂದ ನಿರ್ಣಯಿಸುವುದಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಕುರ್ಚಿಯನ್ನು ಗೌರವಿಸುತ್ತೇವೆ. ಆದರೆ ನಿಮ್ಮ ರಾಷ್ಟ್ರಪತಿ ಹೇಗೆ ಕಾಣುತ್ತಾರೆ” ಬಾಬಾ ಎಂದು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ಭರಾಟೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೋಟದ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಉದಾಹರಣೆಯನ್ನು ಉಲ್ಲೇಖಿಸುತ್ತಿದ್ದ ಸಮಯದಲ್ಲಿ ಮಮತಾ ಬ್ಯಾನರ್ಜಿ ಸಂಪುಟದ ಮಹಿಳಾ ಕಲ್ಯಾಣ ಖಾತೆ ಸಚಿವೆ ಶಶಿ ಪಂಕ ಕೂಡ ಇದ್ದರು ಎಂದು ಬಿಜೆಪಿ ಹೇಳಿಕೊಂಡಿದೆ.
ಹುತಾತ್ಮರ ದಿನದ ಕಾರ್ಯಕ್ರಮದ ಕುರಿತು ಮಾತನಾಡಿದ ಸಚಿವ ಅಖಿಲ್ ಗಿರಿ, ವಿರೋಧ ಪಕ್ಷದ ನಾಯಕ ಸುವೇಂಧು ಅಧಿಕಾರಿ ನಂದಿಗ್ರಾಮ್ ಕ್ಷೇತ್ರದಲ್ಲಿ ಅಶಾಂತಿ ಸೃಷ್ಟಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆದಿದ್ದಾರೆ.
ಸಚಿವ ಅಖಿಲ್ ಗಿರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೆಸರಿಸದೆ ಬಣ್ಣದ ಕುರಿತು ನಿಂದಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷ ಜನರನ್ನು ಅವರ ನೋಟದಿಂದ ನಿರ್ಣಯಿಸುವುದಿಲ್ಲ ಎಂದು ಹೇಳಿದ್ದಾರೆ.
“ಅವರು (ಸುವೇಂದು ಅಧಿಕಾರಿ) ನಾನು (ಅಖಿಲ್ ಗಿರಿ) ಸುಂದರವಾಗಿಲ್ಲ ಎಂದು ಹೇಳುತ್ತಾರೆ. ಅವರು ಎಷ್ಟು ಸುಂದರವಾಗಿದ್ದಾರೆ! ನಾವು ಜನರನ್ನು ಅವರ ನೋಟದಿಂದ ನಿರ್ಣಯಿಸುವುದಿಲ್ಲ. ರಾಷ್ಟ್ರಪತಿ ಕುರ್ಚಿಯನ್ನು ನಾವು ಗೌರವಿಸುತ್ತೇವೆ. ನಿಮ್ಮ ರಾಷ್ಟ್ರಪತಿ ಹೇಗೆ ಕಾಣುತ್ತಾರೆ?” ಎಂದು ಅಖಿಲ ಗಿರಿ ಪ್ರಶ್ನಿಸಿದ್ದರು.