ಮುಷ್ಕರದ ದಿನಗಳ ಬಸ್ ಪಾಸುಗಳ ಅವಧಿ ವಿಸ್ತರಣೆ

ಬೆಂಗಳೂರು,ಏ.೧೧-ಸಾರಿಗೆ ನೌಕರರ ಮುಷ್ಕರದಿಂದ ನಿಗಮದ ವಿದ್ಯಾರ್ಥಿ ಬಸ್ ಪಾಸುಗಳು ಹಾಗೂ ಮಾಸಿಕ ಬಸ್ ಪಾಸುಗಳನ್ನು ಹೊಂದಿರುವ ಸಾರ್ವಜನಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪರ್ಯಾಯ ವ್ಯವಸ್ಥೆ ಕೈಗೊಂಡಿದೆ.
ಮುಷ್ಕರದಿಂದಾಗಿ ಪಾಸುಗಳನ್ನು ಹೊಂದಿರುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನಾನುಕೂಲಕ್ಕೆ ವಿಷಾದ ವ್ಯಕ್ತಪಡಿಸಿದೆ.
ಇದಲ್ಲದೇ ಮುಷ್ಕರದ ಅವಧಿಯ ದಿನಗಳಿಗೆ ಸರಿಸಮಾನವಾಗಿ ಬಸ್ ಪಾಸುಗಳ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ಕೆ ಎಸ್‌ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು ತಿಳಿಸಿದ್ದಾರೆ.