ಮುಷ್ಕರ ಬಿಟ್ಟು ಸೇವೆಗೆ ಮುಂದಾಗಿ

ಬ್ಯಾಡಗಿ, ಏ 17: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿನ ಸಂಕಷ್ಟದಲ್ಲಿ ಸಾರಿಗೆ ಮುಷ್ಕರ ನಡೆಸುವ ಮೂಲಕ ಸಾರ್ವಜನಿಕವಾಗಿ ತೊಂದರೆ ಮಾಡುತ್ತಿರುವುದು ಸರಿಯಲ್ಲ, ಈ ಕೂಡಲೇ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ಕೈಬಿಟ್ಟು ಸೇವೆಗೆ ಮುಂದಾಗುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸಾರಿಗೆ ನೌಕರರಿಗೆ ಮನವಿ ಮಾಡಿದರು.

ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿನ ಜನಸಂಪರ್ಕ ಕಾರ್ಯಾಲಯದಲ್ಲಿ ತಮ್ಮನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ತಾಲೂಕಿನ ಸಾರಿಗೆ ಘಟಕದ ನೌಕರರಿಗೆ ಸಾರಿಗೆ ಮುಷ್ಕರ ಕೈಬಿಡುವಂತೆ ತಿಳಿಸುತ್ತಾ ರಾಜ್ಯ ಸರ್ಕಾರ ಸಮಸ್ಯೆಗಳಿಗೆ ಆದಷ್ಟು ಬೇಗನೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲು ತಾವು ಸಹ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಾರಿಗೆ ನೌಕರರು ಹಾಗೂ ಕುಟುಂಬ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.