ಮುಸ್ಲಿಂ ಬಾಂಧವರಿಂದ ಹುಮನಾಬಾದ ಪಟ್ಟಣದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಹುಮನಾಬಾದ: ಜೂ.29:ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಈದ್ ಉಲ್ ಅದಾ ಬಕ್ರೀದ್ ಹಬ್ಬವನ್ನು ಹುಮನಾಬಾದ ಪಟ್ಟಣ ಹಾಗೂ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಸಂಭ್ರಮದಿಂದ ಆಚರಿಸಿದರು. ಮುಂಜಾನೆ ನಗರದ ಈದ್ಗಾ ಮೈದಾನ, ಮಸೀದಿ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಸಾಮೂಹಿಕ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಪರಸ್ಪರ ಶುಭಕೋರುವುದರ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಡರು.