ಮುಸ್ಲಿಂ ಭಾಂಧವರಿಂದ ಬಕ್ರೀದ್ ಆಚರಣೆ

ಮಾನ್ವಿ,ಜೂ.೨೯- ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದರು.
ಮುಂಜಾನೆಯೇ ಪಟ್ಟಣದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳು ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.ಪ್ರಾರ್ಥನೆಯ ಬಳಿಕ ಮುಸ್ಲಿಂ ಭಾಂದವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಹಂಪಯ್ಯ ನಾಯಕ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಮುಖಂಡ ಎಂ ಈರಣ್ಣ ಸೇರಿದಂತೆ ನೂರಾರು ಮುಖಂಡರು ಭಾಗಿಯಾಗಿದ್ದರು.