
ರಾಯಚೂರು, ಏ.೦೧- ಪ್ರವರ್ಗ ೨ ಬಿ ಅಡಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಪಡಿಸಲು ಕೈಗೊಂಡಿರುವ ನಿರ್ಣಯವನ್ನು ಹಿಂಪಡಿಯುವಂತೆ
ಬಹುಜನ ಸಮಾಜ ಪಾರ್ಟಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿಕೆ ಮಾಡಿರುವುದು ಖಂಡಿನೀಯ ಎಂದು ಆಕ್ರೋಶ ಹೊರಹಾಕಿದರು. ಮೀಸಲಾತಿ ರದ್ದು ವಿಚಾರದಲ್ಲಿ ಬಿಜೆಪಿ ಸರ್ಕಾರ ಅಸಂವಿಧಾನಿಕ ಮತ್ತು ವೈಜ್ಞಾನಿಕವಾಗಿದೆ ಎಂದು ದೂರಿದರು.
ಮುಸ್ಲಿಮರಿಗೆ ಶೇ ೪ ರಷ್ಟು ಮೀಸಲಾತಿ ಕಲ್ಪಿಸಿದ್ದರು. ಅದು ಈವರೆಗೂ ಮುಂದುವರಿದಿತ್ತು. ಇದೀಗ ಬಿಜೆಪಿ ಸರ್ಕಾರ ಮೀಸಲಾತಿ ರದ್ದುಪಡಿಸಿದೆ. ಮತ ಬ್ಯಾಂಕ್ ರಾಜಕೀಯಕ್ಕಾಗಿ ಮುಸ್ಲಿಮ್ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೀಸಲಾತಿ ರದ್ದುಪಡಿಸಿದ ಸರ್ಕಾರದ ಕ್ರಮ ತೀವ್ರ ಖಂಡನೀಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ರದ್ದತಿಯನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಂ ಆರ್ ಭೇರಿ, ಪ್ರಭು ದಳಪತಿ ಸೇರಿದಂತೆ ಉಪಸ್ಥಿತರಿದ್ದರು.