ಮುಸ್ಲಿಂ ಮೀಸಲಾತಿ ರದ್ಧತಿ ಖಂಡಿಸಿ ಇಬ್ರಾಹಿಂ ಪ್ರತಿಭಟನೆ

ಬೆಂಗಳೂರು, ಮಾ.೨೭- ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ರದ್ದು ಮಾಡಿರುವ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮೀಸಲಾತಿ ನಮ್ಮ ಹಕ್ಕು.ಹೀಗಿದ್ದರೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಕಸಿದು ಕೊಂಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಆರೋಪಿಸಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ ೨ಬಿ ಅಡಿ ಇದ್ದ ಮೀಸಲಾತಿಯನ್ನು ಮರಳಿ ನೀಡಬೇಕು ಅಲ್ಲಿಯ ತನಕ ಹೋರಾಟ ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಕ್ರಮವನ್ನು ಇದೇ ಸಂದರ್ಭದಲ್ಲಿ ಅವರು ವಿರೋಧಿಸಿದರು
ಆರ್ಥಿಕವಾಗಿ ಹಿಂದುಳಿದ ಸಮುದಾಯದಡಿ ಮೀಸಲಾತಿ ಪಡೆಯುವವರು ತೀರಾ ವಿರಳ ಇದರಲ್ಲಿ ಮುಂದುವರೆದ ಜಾತಿಗಳೆ ಇವೆ ಎಂದು ಅವರು ಹೇಳಿದ್ದಾರೆ
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮುಸ್ಲಿಂ ಮಹಿಳಾ ಪ್ರತಿಭಟನಾಕಾರ್ತಿ ಒಬ್ಬರು, ಆರ್ಥಿಕವಾಗಿ ಹಿಂದುಳಿದ ಕೋಟಾದಲ್ಲಿ ಮೀಸಲಾತಿ ಪಡೆಯುವ ಸಮುದಾಯಗಳಲ್ಲಿ ನಾಲ್ಕು ಸಮುದಾಯಗಳಿಗೆ.ಆ ನಾಲ್ಕು ಸಮುದಾಯಗಳು ಆರ್ಥಿಕವಾಗಿ ಬಲಿಷ್ಠವಾಗಿದೆ ಎಂದು ಹೇಳಿದರು
ರಾಜ್ಯ ಸರ್ಕಾರ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ನೀಡುವ ಶೇಕಡ ನಾಲ್ಕರಷ್ಟು ಮೀಸಲಾತಿಯನ್ನು ಹಿಂಪಡೆದು ಅದರಲ್ಲಿ ತಲಾ ಎರಡರಷ್ಟನ್ನು ಲಿಂಗಾಯಿತರು ಮತ್ತು ಒಕ್ಕಲಿಗರಿಗೆ ನೀಡುವ ನಿರ್ಧಾರ ತೆಗೆದುಕೊಂಡಿತ್ತು.