
ನವದೆಹಲಿ,ಏ.೧೮- ಕರ್ನಾಟಕದಲ್ಲಿ ಶೇಕಡಾ ೪ ರಷ್ಟು ಮುಸ್ಲಿಂ ಮೀಸಲಾತಿ ಕೋಟಾ ರದ್ದು ಪಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರ ದೋಷಪೂರಿತ ಮತ್ತು ಪ್ರಮಾದದಿಂದ ಕೂಡಿ ಎಂದು ಹೇಳಿದ್ದ ಸುಪ್ರೀಂಕೋರ್ಟ್, ಈ ವಿಷಯದಲ್ಲಿ ಉತ್ತರ ನೀಡಲು ರಾಜ್ಯ ಸರ್ಕಾರ ಸಮಯ ಕೇಳಿದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏ.೨೫ ಕ್ಕೆ ಮುಂದೂಡಿದೆ.ಮುಸ್ಲಿಂ ಮೀಸಲಾತಿ ರದ್ದು ಮಾಡಿದ ಹಲವು ಅರ್ಜಿಗಳ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ಮುಂದಿನವಾರಕ್ಕೆ ವಿಚಾರಣೆ ಮುಂದೂಡಲಾಗಿದೆ.ಒಕ್ಕಲಿಗರು ಮತ್ತು ಲಿಂಗಾಯತರಿಗೆ ಶಿಕ್ಷಣ ಸಂಸ್ಥೆಗಳ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಯಾವುದೇ ಕೋಟಾ ಪ್ರಯೋಜನಗಳನ್ನು ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಏಪ್ರಿಲ್ ೧೩ ರಂದು ನೀಡಿದ್ದ ಭರವಸೆಯನ್ನು ಏಪ್ರಿಲ್ ೨೫ ರವರೆಗೆ ಮುಂದುವರಿಸಲಾಗುವುದು ಎಂದು ನ್ಯಾಯಮೂರ್ತಿಗ ಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠ ಹೇಳಿದೆ.ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲಿಂಗ ವಿವಾಹದ ಬಗ್ಗೆ ಸಂವಿಧಾನ ಪೀಠದ ಮುಂದೆ ವಾದಿಸಬೇಕಾಗಿದೆ ಮತ್ತು ಅವರು ವಾರಾಂತ್ಯದಲ್ಲಿ ಕೋಟಾ ವಿಷಯದ ಬಗ್ಗೆ ಉತ್ತರ ಸಂಗ್ರಹಿಸುತ್ತಾರೆ ಎಂದು ಹೇಳಿದರು.
ಮುಸ್ಲಿಂ ಕೋಟಾ ರದ್ದತಿ ಪ್ರಶ್ನಿಸಿ ಕೆಲವು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯದ ಕೋರಿಕೆಗೆ ಆಕ್ಷೇಪ ವ್ಯಕ್ತಪಡಿಸದೆ, ವಾರಾಂತ್ಯದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಕೋಟಾಕ್ಕೆ ತಡೆ: ಸುಪ್ರೀಂಗೆ ಹೇಳಿಕೆ
ಕರ್ನಾಟಕ ಸರ್ಕಾರ ಮುಂದಿನ ದಿನಾಂಕದವರೆಗೆ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ನೇಮಕಾತಿ ಕೋಟಾಗಳನ್ನು ನೀಡಿದ್ದ ತನ್ನ ಮಾರ್ಚ್ ೨೪ ರ ಆದೇಶವನ್ನು ಮುಂದಿನ ದಿನಾಂಕದವರೆಗೆ ತಡೆಹಿಡಿಯುವುದಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ತಿಳಿಸಿದೆ.
ಮುಸ್ಲಿಮರಿಗೆ ಶೇಕಡ ನಾಲ್ಕು ಮೀಸಲಾತಿಯನ್ನು ಎರಡು ಸಮುದಾಯಗಳ ನಡುವೆ ಸಮಾನವಾಗಿ ವಿಭಜಿಸಬೇಕು ಎನ್ನುವ ಕರ್ನಾಟಕ ಸರ್ಕಾರದ ನಿರ್ಧಾರ “ಸಂಪೂರ್ಣವಾಗಿ ತಪ್ಪಾ ಕಲ್ಪನೆ” ಆಧರಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ರಾಜ್ಯ ಸರ್ಕಾರ ಮತ್ತು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಸದಸ್ಯರನ್ನು ಪ್ರತಿನಿಧಿಸುವ ವಕೀಲರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಏಪ್ರಿಲ್ ೧೭ ರವರೆಗೆ ಕಾಲಾವಕಾಶ ನೀಡಿತ್ತು ಎಂದು ಹೇಳಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯದ ಬಿಜೆಪಿ ಸರ್ಕಾರ ಮೇ ೧೦ ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ವಾರಗಳ ಮೊದಲು ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇಕಡಾ ೪ ರಷ್ಟು ಮೀಸಲಾತಿ ರದ್ದುಗೊಳಿಸಲು ನಿರ್ಧರಿಸಿದೆ.
ಶೇ.ನಾಲ್ಕರಷ್ಟು ಮುಸ್ಲಿಂ ಕೋಟಾವನ್ನು ಒಕ್ಕಲಿಗರು ಮತ್ತು ಲಿಂಗಾಯತರು, ಸಂಖ್ಯಾತ್ಮಕವಾಗಿ ಪ್ರಬಲ ಮತ್ತು ರಾಜಕೀಯವಾಗಿ ಪ್ರಭಾವಿ ಸಮುದಾಯಗಳ ನಡುವೆ ಹಂಚಿತು. ಕೋಟಾಗಳಿಗೆ ಅರ್ಹರಾದ ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗಗಳ ಅಡಿಯಲ್ಲಿ ವರ್ಗೀಕರಿಸಿದೆ.