
ರಾಜಸ್ತಾನ, ಮಾ.೧೨- ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಎಐಎಂಐಎಂ ಪಕ್ಷ ರಾಜಸ್ತಾನದಲ್ಲಿ ಮುಸ್ಲಿಮರ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಮುಂದಾಗಿದೆ.
ಈ ವರ್ಷ ನಡೆಯಲಿರುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಆಲ್ ಇಂಡಿಯಾ ಮಜ್ಲಿಸ್-ಇ-ಅಸಾದುದ್ದೀನ್ ಓವೈಸಿ ರಾಜ್ಯದಲ್ಲಿ ಮುಸ್ಲಿಮರ ಸ್ಥಿತಿಗತಿಯ ಕುರಿತು ಸಮೀಕ್ಷೆ ನಡೆಸಲು ಮುಂದಾಗಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ತವರು ಜೋಧ್‌ಪುರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮುಸ್ಲಿಂ ಸಮಯದಾಯದ ಮಂದಿ ಪ್ರಗತಿ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಪರಾಮರ್ಶೆ ನಡೆಸುವುದಾಗಿ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಮುಸ್ಲಿಮರ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ. ಈ ತಿಂಗಳಿನಲ್ಲಿ ವರದಿ ಬಿಡುಗಡೆ ಮಾಡಲಾಗುವುದು ಮತ್ತು ಮಾರ್ಚ್ ೨೫-೨೬ ರೊಳಗೆ ಸಾರ್ವಜನಿಕಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
“ಮುಸ್ಲಿಮರನ್ನು ಜಾತ್ಯಾತೀತ ಪೋರ್ಟರ್‌ಗಳನ್ನಾಗಿ ಮಾಡಲಾಗಿದೆ. ಚುನಾವಣೆಗಳು ಬಂದಾಗ ಅವರು ಸೆಕ್ಯುಲರಿಸಂ ಅನ್ನು ಜೀವಂತವಾಗಿಡಲು ಹೇಳುತ್ತಾರೆ. ಚುನಾವಣೆ ನಡೆದ ನಂತರ ಮುಸ್ಲಿಂ ಸಮುದಾಯವನ್ನು ಕಡೆಗಣಿಸುತ್ತಾರೆ ಎಂದು ದೂರಿದ್ದಾರೆ.
ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಎಐಎಂಐಎಂ ಸ್ಪರ್ದೆ ನಡೆಸುವ ಕುರಿತು ಯೋಜನೆಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದಿದ್ದಾರೆ.
“ರಾಜಸ್ಥಾನದಲ್ಲಿ ಎಐಎಂಐಎಂ ಚುನಾವಣೆಗೆ ಸ್ಪರ್ಧಿಸಲಿದೆ, ಅದಕ್ಕಾಗಿ ರಾಜ್ಯದ ಪ್ರಮುಖ ನಗರಗಳಿಗೆ ಭೇಟಿ ನೀಡುತ್ತಿದ್ದೇನೆ.ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಾಯ ಮಾಡುವುದು ಗುರಿ” ಎಂದು ಹೇಳಿದರು.
ಚುನಾವಣೆಗೆ ಮುನ್ನ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಓವೈಸಿ, “ಅದನ್ನು ಸಮಯವೇ ಹೇಳುತ್ತದೆ” ಎಂದು ಹೇಳಿದ್ದಾರೆ.