ಮೂಗನಾದ ದಿಯಾ ದೀಕ್ಷಿತ್

ದಿಯಾ ಸಿನಿಮಾ ಮೂಲಕ ಚಂದನವನದಲ್ಲಿ ಮೋಡಿ ಮಾಡಿದ್ದ ಕಿರುತೆರೆ ನಟ ದೀಕ್ಷಿತ್ ಶೆಟ್ಟಿ, ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಜನರ ಮನ ಗೆಲ್ಲಲು ರೆಡಿಯಾಗಿದ್ದಾರೆ

ಅದುವೇ “ಆಣಿ ಮುತ್ತುಗಳು” ತೆಲುಗಿನಲ್ಲಿ ಸಿದ್ಧವಾಗಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್​ ಶೈಲಿಯ ಸಿನಿಮಾ ಕನ್ನಡಕ್ಕೂ ಡಬ್ ಆಗಿದೆ.ತೆಲುಗಿನ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ದೀಕ್ಷಿತ್.

ಅಂದಹಾಗೆ ತೆಲುಗಿನಲ್ಲಿ ಇದು ಅವರ ಎರಡನೇ ಚಿತ್ರ.‌ಈ ಮುಂಚೆ “ರೋಸ್ ವಿಲ್ಲಾ” ಚಿತ್ರ ಮಾಡಿದ್ದರು.ಇದೀಗ ಅದೇ ಪ್ರೊಡಕ್ಷನ್ ಗೆ ಮತ್ತೊಂದು ಸಿನಿಮಾ ಮಾಡಿದ್ದಾರೆ.

ಅಚ್ಯುತ್ ರಾಮಾರಾವ್ ನಿರ್ಮಾಣ ಹಾಗು “ಆಣಿ ಮುತ್ತುಗಳು’ ಚಿತ್ರಕ್ಕೆ ಅಭಿಷೇಕ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಚಿತ್ರ ಬಿಡುಗಡೆ ಸಿದ್ದವಾಗಿದೆ.

ಮೂಗ, ಕಿವುಡ ಮತ್ತು ಕುರುಡ ಈ ಮೂವರ ಹಿನ್ನೆಲೆಯಲ್ಲಿ ಇಡೀ ಚಿತ್ರ ಸಾಗಲಿದ್ದು, ಇದರಲ್ಲಿ ಮೂಗನ ಪಾತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ಕಿವುಡನ ಪಾತ್ರದಲ್ಲಿ ಶ್ರೀನಿವಾಸ್ ರೆಡ್ಡಿ, ಕುರುಡನ ಪಾತ್ರದಲ್ಲಿ ಅಚ್ಯುತ್ ರಾಮ್’ರಾವ್ ನಟಿಸಿದ್ದಾರೆ.

ಕಾಮಿಡಿ ಜತೆಗೆ ರೋಚಕ ತಿರುವುಗಳುಳ್ಳ ಸಸ್ಪೆನ್ಸ್ ಕಥೆಯೂ ಚಿತ್ರದಲ್ಲಿದೆ. ಪೊಲೀಸ್ ತನಿಖೆ, ಕೊಲೆ, ಹುಡುಕಾಟ ಇದೆಲ್ಲದರ ನಡುವೆ ಮುದ್ದಾದ ಪ್ರೇಮ ಕಹಾನಿಯೂ ಸಿನಿಮಾದಲ್ಲಿದೆ.

ಕಿವಿ ಕೇಳಿಸದ, ಮಾತು ಬಾರದ ಮತ್ತು ಕಣ್ಣ ಕಾಣದ ಮೂವರು ಈ ಚಿತ್ರದಲ್ಲಿ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದು, ದೀಕ್ಷಿತ್​ ಶೆಟ್ಟಿಗೆ ಜೋಡಿಯಾಗಿದ್ದಾರೆ. ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.

ಇನ್ನುಳಿದಂತೆ ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ, ಗರುಡವೇಗ ಅಂಜಿ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿದ್ದು, ತೇಝ ಚೀಪುರುಪಲ್ಲಿ, ರವೀಂದ್ರ ರೆಡ್ಡಿ ಅಡ್ಡುಲ ಸಹ ನಿರ್ಮಾಪಕರಾಗಿದ್ದಾರೆ.

ಈಗಾಗಲೇ ಚಿತ್ರತಂಡ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿದ್ದು, ಇನ್ನೇನು ಲಾಕ್​ಡೌನ್​ ಸಡಿಲವಾಗಿ, ಸಿನಿಮಾ ಬಿಡುಗಡೆಗೆ ಅವಕಾಶ ಸಿಗುತ್ತಿದ್ದಂತೆ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ತೆರೆಗೆ ಬರಲಿದೆ.

ಕೈನಲ್ಲಿ ಸಾಲು ಸಾಲು ಚಿತ್ರ

ಕನ್ನಡದ ಹುಡುಗ ದೀಕ್ಷಿತ್ ಶೆಟ್ಟಿ “ಅಣಿ ಮತ್ತುಗಳು” ಮೂಲಕ ತೆಲುಗಿನಲ್ಲಿ ಮೋಡಿ ಮಾಡಲು ಮುಂದಾಗಿದ್ದಾರೆ. ತೆಲುಗು ಭಾಷೆಯ ಜೊತೆಯಲ್ಲಿ ಕನ್ನಡದಲ್ಲಿಯೂ ಚಿತ್ರ ತೆರೆಗೆ ಬರಲಿದೆ.

ಇದಲ್ಲದೆ ಕನ್ನಡದಲ್ಲಿ ಕೆಟಿಎಂ,ಶೀಘ್ರ ಮೇವ ಕಲ್ಯಾಣ ಪ್ರಾಪ್ತಿರಸ್ತು ಚಿತ್ರದಲ್ಲಿ ನಟಿಸುತ್ತಿದ್ದೇನೆ.ಈ ಚಿತ್ರದಲ್ಲಿ ಹಿರಿಯ ನಟ ರಾಮ್ ಕುಮಾರ್ ನಟಿಸುತ್ತಿದ್ದಾರೆ. ದಿಯಾ ಸಹ ನಿರ್ದೇಶಕ ಪ್ರವೀಣ್ ಕುಮಾರ್ ಆಕ್ಷನ್ ಕಟ್ ಹೇಳಿತ್ತಿದ್ದಾರೆ.ಒಳ್ಳೆಯ ಕಥೆಗೆ ಆದ್ಯತೆ ನೀಡುತ್ತಿದ್ದೇನೆ ಎಂದರು ದೀಕ್ಷಿತ್