ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್‌ನಿಂದ ೫೭ ಪೌರ ಕಾರ್ಮಿಕರಿಗೆ ಕಿಟ್ ವಿತರಣೆ

ಮೂಡುಬಿದಿರೆ, ಜೂ.೧- ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಜನುಮ ದಿನದ ಪ್ರಯುಕ್ತ ಇಲ್ಲಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡುಬಿದಿರೆಯ ೫೭ ಪೌರ ಕಾರ್ಮಿಕರಿಗೆ ಆಹಾರ ಕಿಟ್ ಮತ್ತು ಐಸೊಲೇಷನ್ ಕಿಟ್ ಅನ್ನು ಕರಿಂಜೆಯ ಘನತ್ಯಾಜ್ಯ ಘಟಕದ ಬಳಿ ಸೋಮವಾರ ವಿತರಿಸಲಾಯಿತು.
ಕಿಟ್ ವಿತರಿಸಿದ ಬಳಿಕ ಮಾಧ್ಯಮ ಜತೆ ಮಾತನಾಡಿದ ಅಭಯಚಂದ್ರ ಪುರಸಭೆ ಸ್ವಚ್ಚತೆಗಾಗಿ ನಿರಂತರವಾಗಿ ದುಡಿಯುತ್ತಿರುವ ಪೌರ ಕಾರ್ಮಿಕರು ಸ್ವಚ್ಚ ಸಮಾಜ ನಿರ್ಮಿಸುವಲ್ಲಿ ಶ್ರಮಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅವರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಅವರಿಗೆ ಆಹಾರ ಕಿಟ್ ಮತ್ತು ಐಸೋಲೇಷನ್ ಕಿಟ್ ವಿತರಿಸಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗು ಊಟದ ವ್ಯವಸ್ಥೆಯನ್ನು ಮಾಡಲಾಯಿತು ಎಂದರು. ಪುರಸಭೆ ಮುಖ್ಯಾಧಿಕಾರಿ ಇಂದು ಎಂ, ಪರಿಸರ ಎಂಜಿನಿಯರ್ ಶಿಲ್ಪಾ, ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ, ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಪ್ರವೀಣ್ ಕುಮಾರ್, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ಜೊಸ್ಸಿ ಮಿನೇಜಸ್, ಸುರೇಶ್ ಪ್ರಭು, ಪುರಂದರ ದೇವಾಡಿಗ, ಎಪಿಎಂಸಿ ಸದಸ್ಯ ಚಂದ್ರಹಾಸ ಸನಿಲ್, ವಾಲ್ಪಾಡಿ ಗ್ರಾ.ಪಂ ಸದಸ್ಯ ಅರುಣ್ ಕುಮಾರ್ ಶೆಟ್ಟಿ, ನಿತಿನ್ ಬೆಳುವಾಯಿ, ವಾಸುದೇವ ನಾಯಕ್, ಸತೀಶ್ ಭಂಡಾರಿ ಮತ್ತಿತರರು ಈ ಸಂದರ್ಭದಲ್ಲಿದ್ದರು.