ಮೂಡುಬಿದಿರೆ ೫೨ ಮಂದಿಗೆ ಕೋವಿಡ್‌ಲಸಿಕೆ

ಮೂಡುಬಿದಿರೆ, ಎ. ೨೨- ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್‌ಟೌನ್ ಹಾಗೂ ಕೀರ್ತಿನಗರ ಅಭಿವೃದ್ಧಿ ಸಮಿತಿಯು ಸಮುದಾಯ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಕೀರ್ತಿನಗರ ಟೆಂಪಲ್‌ಟೌನ್ ಸಭಾಭವನದಲ್ಲಿ ಬುಧವಾರ ನಡೆದ ಕೊರೊನಾ ಲಸಿಕೆ ಅಭಿಯಾನವನ್ನು ಏರ್ಪಡಿಸಿದ್ದು ೫೨ ಮಂದಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡರು.
ಪರಸಭಾಧ್ಯಕ್ಷ ಪ್ರಸಾದ್ ಕುಮಾರ್ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ಕೊರೊನಾ ಎರಡನೇ ಹಂತವು ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಲಸಿಕೆಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವ ಮೂಲಕ ಕೊರೊನಾವನ್ನು ನಿಯಂತ್ರಿಸಬಹುದು ಎಂದು ಹೇಳಿದರು.
ರೋಟರಿ ಕ್ಲಬ್ ಮೂಡುಬಿದರೆ ಟೆಂಪಲ್‌ಟೌನ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದರು. ಸಮುದಾಯ ಆರೋಗ್ಯ ಕೇಂದ್ರದ ಶಿಕ್ಷಣಾಧಿಕಾರಿ ಸುಶೀಲ ಕೊರೊನಾ ಲಸಿಕೆ ತೆಗೆದುಕೊಳ್ಳುವುದರಿಂದ ಆಗುವ ಪ್ರಯೋಜನ ಹಾಗೂ ಕೊರೊನಾ ನಿಯಂತ್ರಿಸಲು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕೀರ್ತಿನಗರ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಶ್ ಬಂಗೇರ ಮಾತನಾಡಿದರು. ರೋಟರಿ ಝೋನಲ್ ಲೆಪ್ಟಿನೆಂಟ್ ಬಲರಾಮ ಕೆ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ಧರು. ಕಾರ‍್ಯದರ್ಶಿ ಪೂರ್ಣಚಂದ್ರ ಜೈನ್ ವಂದಿಸಿದರು. ಹರೀಶ್ ಎಂ.ಕೆ. ಕಾರ‍್ಯಕ್ರಮ ನಿರ್ವಹಿಸಿದರು.