ಮೂಢನಂಬಿಕೆಗಳಿಗೆ ಬಲಿಯಾಗದಿರಿ- ಪಿ.ಹೆಚ್ ನರಹಟ್ಟಿ

ರಾಯಚೂರು.ಜು.೨೯- ಕೃಷಿ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರ ೨೦೨೧-೨೨ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಯಚೂರು ತಾಲೂಕು ಘಟಕದ ಸಹಯೋಗದ ಅಡಿಯಲ್ಲಿ ತಾಲೂಕಿನ ಸಿಂಗನೊಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾದಗಿದ್ದ ಈ ಕಾರ್ಯಕ್ರಮದಲ್ಲಿ ಹೆಚ್.ಎನ್. ಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲರಾದ ಪಿ.ಹೆಚ್. ನರಹಟ್ಟಿ ಯವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಪವಾಡ ಬಯಲು ವಿಷಯದ ಮೇಲೆ ಉಪನ್ಯಾಸ ನೀಡಿದರು.
ಇವತ್ತಿನ ದಿನಗಳಲ್ಲಿ ಪವಾಡ ಮಾಡಿ ಜನರನ್ನು ಮೋಸ ಮಾಡುವ ಅದೆಷ್ಟೋ ಜನ ಸಮಾಜದಲ್ಲಿ ಇದ್ದಾರೆ ಅವರಿಂದ ಸಾಮಾನ್ಯ ಜನರು ಮೋಸ ಹೋಗಬಾರದು ಎಂದು ಹೇಳಿದರು. ಅವರು ತಮ್ಮ ಉಪನ್ಯಾಸದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ಪವಾಡದ ಹಿಂದೆ ಅಡಗಿರುವ ವೈಜ್ಞಾನಿಕತೆಯನ್ನು ಪ್ರಶ್ನೆ ಮಾಡುವ ಮೂಲಕ ತಿಳಿದುಕೊಳ್ಳಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕೆಲವೊಂದು ಪವಾಡಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳ ಎದುರಲ್ಲೇ ಮಾಡಿ ಅದರ ಹಿಂದಿನ ವೈಜ್ಞಾನಿಕ ಸತ್ಯ ತಿಳಿಸಿದರು.
ಈ ಸಂದರ್ಭದಲ್ಲಿ ಕೃಷಿ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಡಾ. ಯೇಸಪ್ಪ ಎಲ್. ಮತ್ತು ಡಾ. ಮುರಳಿ ಎಮ್. ಅವರು ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಸಿಂಗನೋಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಸಪ್ಪ ಗದ್ದಿ ಮತ್ತು ಶಾಲೆಯ ಶಿಕ್ಷಕ ವೃಂದದವರು ಸೇರಿದಂತೆ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.