ಮೂರನೇ ದಿನದಂದು ಓರ್ವ ಅಭ್ಯರ್ಥಿಯಿಂದ ಒಂದು ನಾಮಪತ್ರ ಸಲ್ಲಿಕೆ

ಕಲಬುರಗಿ:ಏ.16:ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಮಂಗಳವಾರದಂದು ಓರ್ವ ಅಭ್ಯರ್ಥಿಯಿಂದ ಒಂದು ನಾಮಪತ್ರ ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿ ವಿವರ ಇಂತಿವೆ. ಸ್ವತಂತ್ರ ಅಭ್ಯರ್ಥಿಯಾಗಿ ಶಶಿಧರ ಬಸವರಾಜ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.

  ನಾಮಪತ್ರ ಸಲ್ಲಿಸಲು ಏಪ್ರಿಲ್ 19 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಏಪ್ರಿಲ್ 22 ಇರುತ್ತದೆ. ಇಲ್ಲಿಯವರೆಗೆ 7 ಅಭ್ಯರ್ಥಿಗಳಿಂದ 11 ನಾಮಪತ್ರಗಳು ಸಲ್ಲಿಸಿದಂತಾಗಿದೆ.