ಮೂರು ದಿನ ಚಾಮುಂಡಿ ಬೆಟ್ಟ ಸಾರ್ವಜನಿಕರಿಗೆ ಬಂದ್

ಮೈಸೂರು,ಸೆ.16-ಇಂದಿನಿಂದ ಮೂರು ದಿನಗಳ ಕಾಲ ಇತಿಹಾಸ ಪ್ರಸಿದ್ದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಭಂದಿಸಲಾಗಿದೆ.
ಸೆ.17 ರಂದು ಮಹಾಲಯ ಅಮಾವಾಸ್ಯೆ ಇರುವುದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಮತ್ತು ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ಮೂರು ದಿನಗಳ ಕಾಲ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ.
ನಿರ್ಭಂದ ಹಿನ್ನಲೆ,ಬೆಟ್ಟದ ಪಾದ ಬಳಿ ಪೆÇಲೀಸರ ನಿಯೋಜನೆ.