ಮೂರು ದಿನ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಬಾಲಚಂದ್ರ ನಿರ್ಧಾರ

ಬೆಳಗಾವಿ, ಏ 12- ಈ ತಿಂಗಳ 16ರವರೆಗೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇನೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬೇರೆ ಕೆಲಸದಲ್ಲಿ ತೊಡಗಿಕೊಂಡಿದ್ದರಿಂದ ಬಿಜೆಪಿ ಅಭ್ಯರ್ಥಿ ಮಂಗಳ ಪರ ಪ್ರಚಾರ ಮಾಡುತ್ತೇನೆ‌. ಸುರೇಶ್ ಅಂಗಡಿ ಗೆಲುವು ಸಾಧಿಸಿದ ಮಾದರಿಯಲ್ಲಿ ಮಂಗಳಾ ಗಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ತಮ್ಮ ಸಹೋದರ ಇರಬಹುದು. ತಾವು ಮತ್ತು ರಮೇಶ್ ಜಾರಕಿಹೊಳಿ ಪಕ್ಷದ ಪರ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಸದ್ಯ ರಮೇಶ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಸದ್ಯ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಗೆಟಿವ್ ವರದಿ ಬಂದರೆ ಅವರು ಪ್ರಚಾರದಲ್ಲಿ ಭಾಗವಹಿಸುತ್ತಾರೆ ಎಂದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದರು.
ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ಪ್ರರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸಿದ್ದೇವೆ. ವಕೀಲರ ಮೂಲಕ ನೋಡಿಕೊಳ್ಳುತ್ತಿದ್ದೇವೆ. ಎಸ್‌ಐಟಿ ತನಿಖೆ ಪ್ರಗತಿಯಲ್ಲಿದೆ ಎಂದು ಪ್ರಶ್ನೆಯೊಂದಕ್ಕೆ ಜಾರಕಿಹೊಳಿ ಉತ್ತರಿಸಿದರು.