ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,ಸೆ.೨೪- ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ವಾಸಿಸುತ್ತಿರುವ ೯ ಗ್ರಾಮಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಸೆ.೨೩ರ ನಗರದ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿನ ಪರಿಶಿಷ್ಟ ಪಂಗಡ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಒಂಭತ್ತು ಗ್ರಾಮಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು, ಈ ಬಗ್ಗೆ ಯಾವುದೇ ರೀತಿಯ ದೂರುಗಳು ಕೇಳಿ ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ. ರುದ್ರನ್, ಸಹಾಯಕ ಆಯುಕ್ತರಾದ ಮದನ್ ಮೋಹನ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹೇಮಚಂದ್ರ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.