
ಕಲಬುರಗಿ,ಆ.24-ನಗರದ ಡಾ.ಬಿ.ಆರ್.ಅಂಬೇಡ್ಕರ್ ಡಿಗ್ರಿ ಕಾಲೇಜಿನ ಹೊರ ಭಾಗದಲ್ಲಿ 6 ಎಸಿಗೆ ಅಳವಡಿಸಿದ್ದ ಗೋದ್ರೇಜ್ ಕಂಪನಿಯ ಫ್ಯಾನ್‍ಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬ್ರಹ್ಮಪುರ ಪೊಲೀಸರು ಬಂಧಿಸಿದ್ದಾರೆ.
ಬಾಪು ನಗರದ ರಾಹುಲ್ ಆನಂದ ಸಕಟ (28), ಕಾರ್ತಿಕ ಕೃಷ್ಣಾ ಉಪಾಧ್ಯ (20) ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಕನನ್ನು ಬಂಧಿಸಿ 6 ಎಸಿಗೆ ಅಳವಡಿಸಿದ ಫ್ಯಾನ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕಳ್ಳತನ ಪ್ರಕರಣದ ಆರೋಪಿಗಳ ಪತ್ತೆಗೆ ಉಪ ಪೊಲೀಸ್ ಆಯುಕ್ತರಾದ ಅಡ್ಡೂರು ಶ್ರೀನಿವಾಸಲು, ಐ.ಎ.ಚಂದ್ರಪ್ಪ, ದಕ್ಷಿಂ ಉಪ ವಿಭಾಗದ ಎಸಿಪಿ ಭೂತೇಗೌಡ ಅವರ ಮಾರ್ಗದರ್ಶನದಲ್ಲಿ ಬ್ರಹ್ಮಪುರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸಚಿನ್ ಎಸ್.ಚಲವಾದಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಿವಪ್ರಕಾಶ, ಕೇಸುರಾಯ, ವಿಶ್ವನಾಥ, ರಾಮು ಪವಾರ, ಸಂತೋಷಕುಮಾರ, ಶಿವಶರಣಪ್ಪ, ನವೀನಕುಮಾರ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು. ಈ ತಂಡ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದನ್ನು ನಗರ ಪೊಲೀಸ್ ಆಯುಕ್ತ ಚೇತನ್ ಆರ್.ಅವರು ಶ್ಲಾಘಿಸಿದ್ದಾರೆ.