ಮೂವರ ಮೇಲೆ ಹುಚ್ಚು ನಾಯಿ ದಾಳಿ

ಬೆಂಗಳೂರು, ನ.17- ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿಗಳ ಮೇಲೆ
ಹುಚ್ಚು ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಇಲ್ಲಿನ ಬೆಂಗಳೂರು ಹೊರವಲಯದ ಬೇಗೂರು ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯಲ್ಲಿ ಗುಂಡೇನಹಳ್ಳಿ ಕಿರಣ್ ಎಂಬುವವರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಸದ್ಯ ಗಾಯಳುಗಳಿಗೆ ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಸ್ಥಳೀಯ ನಗರ ಸಭೆ
ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.