
ಅಮೃತಸರ, ಜು.22- ಗಾಯಕಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಪೊಲೀಸರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.
ಪಂಜಾಬ್ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಆರೋಪಿಗಳು ಹತ್ಯೆಗೀಡಾಗಿದ್ದಾರೆಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ಮಾಹಿತಿ ನೀಡಿದ್ದಾರೆ
ಗುಂಡೇಟಿಗೆ ಬಲಿಯಾದವರನ್ನ ಜಗ್ರೂಪ್ ಸಿಂಗ್ ಹಾಗೂ ಮನ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಹತ ಆರೋಪಿಗಳಿಂದ ಎಕೆ 47 ಹಾಗೂ ಪಿಸ್ತೂಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ .
ಘಟನೆಯಲ್ಲಿ ಓರ್ವ ಪತ್ರಕರ್ತನು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದರು.
ಮೇ. 19ರಂದು ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೊಸೆವಾಲಾ ಹತ್ಯೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಗ್ಯಾಂಗ್ಸ್ಟರ್ಗಳಾದ ಜಗರೂಪ್ ಸಿಂಗ್, ಮನಪ್ರೀತ್ ಸಿಂಗ್ ಸೇರಿದಂತೆ ಕೆಲವರ ಬಂಧನ ಮಾಡಿದ್ದಾರೆ.