ಮೃತರ ವಾರಸುದಾರರಿಗೆ ಸಚಿವ ಪ್ರಿಯಾಂಕ್ ಪರಿಹಾರ ವಿತರಣೆ

ಕಲಬುರಗಿ,ಮಾ.12:ಕಳೆದ ನವೆಂಬರ್ ತಿಂಗಳಲ್ಲಿ ಚಿತ್ತಾಪುರ ತಾಲೂಕಿನ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ನಾಲವಾರದ ಗ್ರಾಮದ ಆರು ಜನರ ವಾರಸುದಾರರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಹಾರದ ಚೆಕ್ ವಿತರಿಸಿದರು.ಇಂದು ನಾಲವಾರದ ಗ್ರಾಮದಲ್ಲಿ ಮೃತರ ಮನೆಗೆ ಭೇಟಿ ನೀಡಿದ ಸಚಿವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರು ಜನರ ವಾರಸುದಾರರಿಗೆ ತಲಾ ರೂ 2 ಲಕ್ಷದ ರೂ.ಪರಿಹಾರದ ಚೆಕ್ ವಿತರಿಸಿದರು.
ರಸ್ತೆ ಅಪಘಾತದಲ್ಲಿನಾಲವಾರ ಗ್ರಾಮದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮ ದ್ ಪಾಷಾ 20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ವರ್ಷದ ಬಾಲಕ ಮಹಮ್ಮದ್ ಹುಸೇನ್ ಗಂಭೀರ ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು
ಈ ಸಂದರ್ಭದಲ್ಲಿ ತಹಸೀಲ್ದಾರ ಶೇಖ್ ಶಾಷಾವಲಿ, ಗ್ರಾಮದ ಮುಖಂಡರಾದ ಮಹೆಮೂದ್ ಸಾಹೇಬ್, ಶಿವಾನಂದ ಪಾಟೀಲ್, ವೀರನಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ಸೇರಿದಂತೆ ಹಲವರಿದ್ದರು.