ಮೃತ ಚಾಲಕನ ಕುಟುಂಬ ಸದಸ್ಯರಿಗೆ 30 ಲಕ್ಷ ರೂ. ಪರಿಹಾರ ಪ್ರಕಟ

ಬೆಂಗಳೂರು, ಏ. 16- ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಬಾಗಲಕೋಟೆ ಜಿಲ್ಲೆಯ ಕೆಎಸ್ಆರ್ ಟಿಸಿ ಬಸ್ ಚಾಲಕ ಎನ್ ಆಕೆ ಆವಟಿಯವರ ಕುಟುಂಬಕದ ಸದಸ್ಯರಿಗೆ ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಮಣ ಸವದಿ 30 ಲಕ್ಷ ರೂ ಪರಿಹಾರ ಪ್ರಕಟಿಸಿದ್ದಾರೆ.
ಈ ಕುರಿತು ಇಂದು ಪ್ರತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸಾರಿಗೆ ಸಂಸ್ಥೆಯಲ್ಲಿ ನೌಕರಿ ನೀಡುವುದಾಗಿ ಪ್ರಕಟಿಸಿದ್ದಾರೆ.
ಶಾಂತಿಯುತವಾಗಿ ಮುಷ್ಕರ ನಡೆಸುವುದಾಗಿ ಹೇಳುತ್ತಲೇ ಸಹೋದ್ಯೋಗಿ ಜೀವ ಬಲಿತೆಗೆದುಕೊಂಡಿರುವುದನ್ನು ಅವರು ತೀವ್ರವಾಗಿ
ಖಂಡಿಸಿದ್ದಾರೆ.
ಕೆಲವು ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟದಲ್ಲಿ ಗಾಯಗೊಂಡು ಚಾಲಕ ಮೃತಪಟ್ಟಿರುವುದು ದುರದೃಷ್ಟಕರ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಮುಷ್ಕರದ ನಡುವೆ 5300 ಕ್ಕೂ ಹೆಚ್ಚು ಬಸ್ ಗಳು ಸಂಚರಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.