ಮೃತ ಶಿಕ್ಷಕನ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ಸಿರಾ, ಆ. ೫- ತಾಲ್ಲೂಕಿನ ಚನ್ನನಕುಂಟೆ ಸಮೀಪ ದ್ವಿಚಕ್ರ ವಾಹನದಲ್ಲಿ ಸೇತುವೆ ದಾಟುತ್ತಿದ್ದ ಸಂದರ್ಭದಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಶಿಕ್ಷಕ ಆರೀಫ್ ಉಲ್ಲಾ ರವರ ಮನೆಗೆ ಅಧಿಕಾರಿಗಳೊಂದಿಗೆ ಶಾಸಕ ರಾಜೇಶ್‌ಗೌಡ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದಿಂದ ೫ ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಅಂಜಿನಪ್ಪ, ಉಪಾಧ್ಯಕ್ಷೆ ಅಂಬುಜ, ತಹಶೀಲ್ದಾರ್ ಮಮತಾ, ಡಿವೈಎಸ್‌ಪಿ ನವೀನ್, ಬಿಇಓ ಶಂಕರ್, ಸಿರಾ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಾರುತೀಶ್, ಪ್ರಕಾಶ್ ಮುದ್ದುರಾಜ್, ಜಿಲಾನ್ ಮತ್ತಿತರರು ಉಪಸ್ಥಿತರಿದ್ದರು.