ಮೇಕೆದಾಟು ; ಅನುಮತಿಗೆ ಜಾರಕಿಹೊಳಿ ಆಗ್ರಹ

ಬೆಂಗಳೂರು, ಸೆ ೧೬- ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಕೇಂದ್ರ ವನ್ನ ಒತ್ತಾಯಿಸಿದೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಇಂದು ದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನ ಬೇಟಿ ಮಾಡಿ.
ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಮಾತುಕತೆ ನಡೆಸಿ ದರು

ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆಯೂ ಮನವಿ‌ ಮಾಡಿದರು.

ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ‌, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಯನ್ನಾಗಿ ಘೋಷಿಸುವಂತೆ ಶೇಖಾವತ್ ಅವರಿಗೆ ಒತ್ತಾಯಿಸಿದರು. 

ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ‌ಕಾವೇರಿ ನೀರಾವರಿ ನಿಗಮದ ‌ಎಂಡಿ ಜೈಪ್ರಕಾಶ್ ಉಪಸ್ಥಿತರಿದ್ದರು.