ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೈ ಪಾದಯಾತ್ರೆ

ಬೆಂಗಳೂರು,ನ.೨೮- ಕಾವೇರಿ ನದಿಪಾತ್ರದಲ್ಲಿ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಿನ ವರ್ಷ ಜನವರಿಯಲ್ಲಿ ಮೇಕೆದಾಟು ವಿನಿಂದ ಬೆಂಗಳೂರುವರೆಗೆ ಕಾಂಗ್ರೆಸ್ ಪಕ್ಷ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ನಾಯಕರು ಪಾದಯಾತ್ರೆ ನಡೆಸುವ ಮೂಲಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಶ್ರೀಘ್ರ ಯೋಜನೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೇಕೆದಾಟು ಹಾಗು ಸಂಗಮ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡಿಕೆ ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಅವಧಿಯಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು ಅಲ್ಲದೆ ವಿಸೃತ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಿದ್ದರು.
ರಾಜ್ಯ ಸರ್ಕಾರವೂ ಕೂಡ ಯೋಜನೆ ಜಾರಿಗೆ ಯಾವುದೇ ಅಡೆತಡೆಯಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಯೋಜನೆ ಜಾರಿಗೆ ಡಿಕೆ ಶಿವಕುಮಾರ್ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ