ಮೇಲ್ಮನೆ ಸಮರ 15 ಸ್ಥಾನಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ


ಬೆಂಗಳೂರು,ನ.೨೪- ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಎಂದರೂ ೧೫ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಜಿಲ್ಲಾ ಪ್ರವಾಸಕ್ಕೆ ಹೊರಡುವ ಮುನ್ನ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ೨೫ ಕ್ಷೇತ್ರಗಳ ಪೈಕಿ ೨೦ರಲ್ಲಿ ಸ್ಪರ್ಧೆ ಮಾಡಿದೆ. ಇವುಗಳಲ್ಲಿ ೧೫ ಸ್ಥಾನಗಳನ್ನು ಗೆಲ್ಲಲಿದೆ ಎಂದರು.
ಎಲ್ಲೆಡೆ ಬಿಜೆಪಿಗೆ ಅನುಕೂಲಕರವಾದ ವಾತಾವರಣವಿದೆ. ಹಾಗಾಗಿ, ೧೫ ಸ್ಥಾನಗಳ ಗೆಲುವು ನಿಶ್ಚಿತ ಎಂದು ಅವರು ಹೇಳಿದರು. ವಿಧಾನ ಪರಿಷತ್‌ನ ಚುನಾವಣಾ ಪ್ರಚಾರಕ್ಕಾಗಿ ಇಂದು ಶಿವಮೊಗ್ಗಕ್ಕೆ ತೆರಳುತ್ತಿದ್ದೇನೆ, ೨ ದಿನ ಶಿವಮೊಗ್ಗದಲ್ಲಿ ಪ್ರಚಾರ ನಡೆಸಿ, ನಂತರ ದಾವಣಗೆರೆಯಲ್ಲೂ ಪ್ರಚಾರ ಕೈಗೊಳ್ಳುವುದಾಗಿ ಅವರು ಹೇಳಿದರು.