ಮೇ೭ ರಂದು ಸ್ಟಾಲಿನ್ ಪದಗ್ರಹಣ

ಚೆನ್ನೈ, ಮೇ.೩- ತಮಿಳುನಾಡಿನಲ್ಲಿ ಎರಡು ಅವಧಿಗೆ ಅಧಿಕಾರದಲ್ಲಿದ್ದ ಆಡಳಿತರೂಢ ಎಐಎಡಿಎಂಕೆ ಪಕ್ಷ ವನ್ನು ಮನೆಗೆ ಕಳುಹಿಸಿರುವ ಮತದಾರ ಈ ಮೂಲಕ ದಶಕದ ನಂತರ ಡಿಎಂಕೆ ಮತ್ತೆ ಅಧಿಕಾರಕ್ಕೆ ತಂದಿದ್ದಾರೆ.
ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರು ಈ ತಿಂಗಳ ೭ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ .
ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಡಿಎಂಕೆ ಪಕ್ಷ ತನ್ನ ಮೈತ್ರಿಕೂಟದ ಬೆಂಬಲದೊಂದಿಗೆ ೧೫೮ ಸ್ಥಾನಗಳನ್ನು ಗೆದ್ದಿದೆ ಹೀಗಾಗಿ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಅವರು ಈ ತಿಂಗಳ ೭ ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅವರ ಸಹೋದರಿ ಹಾಗೂ ಸಂಸದೆ ಎಂಕೆ ಕನಿಮೊಳಿ ತಿಳಿಸಿದ್ದಾರೆ
ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಸರಳವಾಗಿ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮಲೆನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದೆ ಹೀಗಾಗಿ ಇದೇ ಮೊದಲ ಬಾರಿಗೆ ಸ್ಟಾಲಿನ್ ಅವರು ಮುಖ್ಯಮಂತ್ರಿ ಗದ್ದುಗೆ ಏರಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
೨೩೪ ಸದಸ್ಯರಿರುವ ವಿಧಾನಸಭೆಯಲ್ಲಿ ಏಪ್ರಿಲ್ ೬ರಂದು ಚುನಾವಣೆ ನಡೆದಿತ್ತು ನೆನ್ನೆ ನಡೆದ ಮತಎಣಿಕೆಯಲ್ಲಿ ಡಿಎಂಕೆ ಮೈತ್ರಿ ಕೂಟ ೧೫೮ ಹಾಗೂ ಆಡಳಿತರೂಢ ಎಐಎಡಿಎಂಕೆ ೭೭ ಸ್ಥಾನಗಳಿಗೆ ಮಾತ್ರ ಸೀಮಿತವಾಗಿತ್ತು.
ಕರುಣಾನಿಧಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಂ.ಕೆ ಸ್ಟಾಲಿನ್ ಅವರು ಉಪಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದರು ಇದೀಗ ಮೊದಲ ಬಾರಿಗೆ ಮುಖ್ಯಮಂತ್ರಿ ಗಾದಿಯಲ್ಲಿ ಸಜ್ಜಾಗಿದ್ದಾರೆ

ಸಂಭ್ರಮ ಬೇಡ:

ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಮೈತ್ರಿ ಕೂಟ ೧೫೮ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಂಭ್ರಮ ಬೇಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಆರೋಗ್ಯದ ಕಡೆ ಗಮನ ಹರಿಸೋಣ ಎಂದು ಅವರು ಪಕ್ಷದ ಕಾರ್ಯಕರ್ತರು ಹಾಗೂ ಮಿತ್ರಪಕ್ಷಗಳ ಮುಖಂಡರಿಗೆ ಮನವಿ ಮಾಡಿದ್ದಾರೆ.

ರಾಜಧಾನಿ ಚೆನ್ನೈ ನ ವಿಧಾನಸಭಾ ಕ್ಷೇತ್ರಗಳ ಪೈಕಿ ೧೬ ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಎಂಕೆ ಪಾರು ಪತ್ಯ ಸ್ಥಾಪಿಸಿದೆ