ಮೇ ಆರಂಭದಿಂದಲೇ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ

ನವದೆಹಲಿ, ಏ.19- ದೇಶದೆಲ್ಲೆಡೆ ಕೊರೋನಾ ಎರಡನೇ ಅಲೆಯ ತೀವ್ರಗೊಳ್ಳತ್ತೀರುವ ಬೆನ್ನಲ್ಲೆ ಮೇ 1 ರಿಂದಲೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರವೂ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಿಗ್ಗೆಕ್ಕೆ ಕೊರೋನಾ ಪರಿ ಸ್ಥಿತಿ ಕುರಿತು ಸಭೆ ನಡೆಸಿದ ಬಳಿಕ ಆರೋಗ್ಯ ಸಚಿವಾಲಯ ಈ ನಿರ್ಧಾರ ಪ್ರಕಟಿಸಿ, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಆರಂಭದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿತ್ತು. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋರೋನಾ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ.

ಅನೇಕ ರಾಜ್ಯಗಳಿಂದ ಒತ್ತಡ ಕೇಳಿಬಂದ ಹಿನ್ನಲೆಯಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ. ಇನ್ನು, ಮೇ 1 ರಿಂದ ಕೋವಿಡ್ ವ್ಯಾಕ್ಸಿನೇಷನ್‌ನ ಮೂರನೇ ಹಂತದ ಅಭಿಯಾನ ಆರಂಭವಾಗಲಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಅಲ್ಲದೆ ದೇಶದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಹಾಗೂ 45 ವರ್ಷ ಮೇಲ್ಪಟ್ಟು ಮಧುಮೇಹದಂಥ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ನೀಡಲಾಗುತ್ತಿದೆ. ಏಪ್ರಿಲ್‌ 1ರಿಂದ 45 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿತ್ತು.

ಇನ್ನು, ರಾಷ್ಟ್ರವ್ಯಾಪಿ 24 ಗಂಟೆಗಳಲ್ಲಿ 2,73,810 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದರೆ, 1,619 ಮಂದಿ ಸಾವನ್ನಪ್ಪಿದ್ದಾರೆ. ಅದೇ ರೀತಿ, 1,44,178 ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ವರದಿಯಾಗಿದೆ. ಮತ್ತೊಂದೆಡೆ ಒಟ್ಟು ಪ್ರಕರಣಗಳ ಸಂಖ್ಯೆ ಈಗ 1,50,61,919 ಕ್ಕೆ ತಲುಪಿದ್ದು, 19,29,329 ಸಕ್ರಿಯ ಪ್ರಕರಣಗಳು ಮತ್ತು 1,78,769 ಸಾವುಗಳು ಸಂಭವಿಸಿವೆ.