ಮೇ ೩೧ರವರೆಗೆ ಅಂ.ರಾ ವಿಮಾನ ಸಂಚಾರ ರದ್ದು


ನವದೆಹಲಿ, ಏ.೩೦- ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಮೇ ೩೧ರ ತನಕ ಕೇಂದ್ರಸರ್ಕಾರ ನಿಷೇಧಿಸಿದೆ.
ದೇಶದಲ್ಲಿ ಪ್ರತಿನಿತ್ಯ ಮೂರು ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಅಂತರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ.
ಈ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯ ಭಾರತದಿಂದ ಹೊರಡುವ ಮತ್ತು ಭಾರತಕ್ಕೆ ಬರುವ ಅಂತರಾಷ್ಟ್ರೀಯ ವಿಮಾನ ಗಳನ್ನು ನಿರ್ಬಂಧಿಸಿರುವುದಾಗಿ ತಿಳಿಸಿದೆ.
ಈ ಸಂಬಂಧ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಸುತ್ತೋಲೆ ಹೊರಡಿಸಿದೆ. ದಿನನಿತ್ಯ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ ಅನಿವಾರ್ಯವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಜಿಸಿಎ ತಿಳಿಸಿದೆ.
ತೀರಾ ಅಗತ್ಯ ಮತ್ತು ಅನಿವಾರ್ಯ ಸಂದರ್ಭಗಳಲ್ಲಿ ಅಂತರಾಷ್ಟ್ರೀಯ ಅಭಿಮಾನ ಸಂಚಾರಕ್ಕೆ ಮಾತ್ರ ಆಯ್ದ ದೇಶಗಳಿಗೆ ಆದ್ಯತೆ ಆಧಾರದ ಮೇಲೆ ಸಂಚರಿಸಲು ಅನುವು ನೀಡುವುದಾಗಿ ಸಚಿವಾಲಯ ತಿಳಿಸಿದೆ