ಮೇ.೮ ಎಸ್‌ಎಸ್‌ಎಲ್‌ಸಿ ಫಲಿತಾಂಶ

ಬೆಂಗಳೂರು.ಮೇ೫:ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು. ಮೇ ೧೦ ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಇದೀಗ ಬಂದ ಮಾಹಿತಿ ಪ್ರಕಾರ ಮೇ ೮ ರಂದೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ. ಮೇ ೧೦ ರಂದು ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆ ಮೇ ೮ ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ಮಾರ್ಚ್ ೩೧ ರಿಂದ ಆರಂಭವಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಏಪ್ರಿಲ್ ೧೫ ಕ್ಕೆ ಮುಕ್ತಾಯಗೊಂಡಿದ್ದವು. ಎಸ್‌ಎಸ್ ಎಲ್ ಸಿ ಪರೀಕ್ಷೆಯನ್ನು ೮.೬ ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಅಂದಾಜು ೪೫ ಲಕ್ಷ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗಿದೆ.ವಿದ್ಯಾರ್ಥಿಗಳು ಮತ್ತು ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.ಅಧಿಕೃತ ವೆಬ್ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.