ಮೇ.೯ ಖುಷಿ ಸಿನಿಮಾದ ಮೊದಲ ಹಾಡು ರಿಲೀಸ್

ಹೈದರಾಬಾದ್,ಮೇ.೫-ಟಾಲಿವುಡ್ ಬ್ಯೂಟಿ ಸಮಂತಾ ಹಾಗೂ ಗೀತಾ ಗೋವಿದಂ ಖ್ಯಾತಿಯ ನಟ ವಿಜಯ್ ದೇವರಕೊಂಡ ಜೋಡಿ ತೆರೆ ಮೇಲೆ ಕಮಾಲ್ ಮಾಡಲು ಸಜ್ಜಾಗಿದೆ. ಖುಷಿ ಸಿನಿಮಾದ ಮೂಲಕ ತೆರೆ ಮೇಲೆ ಬರುತ್ತಿದ್ದು, ಈ ಸಿನಿಮಾದ ಆಪ್ಡೇಟ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಸಿಹಿಸುದ್ದಿಯೊಂದನ್ನು ನೀಡಿದೆ.
ಖುಷಿ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಮೇ ೯ರಂದು ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಹಾಡು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದ್ದು, ಈ ವಿಷಯ ಕೇಳಿ ವಿಜಯ್ ಮತ್ತು ಸಮಂತಾ ಅಭಿಮಾನಿಗಳು ಖುಷಿಯಾಗಿದ್ದಾರೆ.
ಶಾಕುಂತಲಂ ಚಿತ್ರದ ನಂತರ ಸಮಂತಾ ವಿಜಯ್ ದೇವರಕೊಂಡ ಜೊತೆಗಿನ ಖುಷಿ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಮತ್ತೊಂದೆಡೆ ಲೈಗರ್ ಚಿತ್ರದ ಮೂಲಕ ಫ್ಲಾಪ್ ಆಗಿದ್ದ ವಿಜಯ್ ದೇವರಕೊಂಡ ಈ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಶಿವ ನಿರ್ವಾಣ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಸಿನಿಮಾ ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ಆಗಿದ್ದು, ಸದ್ಯ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಯುವ ಪ್ರೇಕ್ಷಕರಿಗೆ ಇಷ್ಟವಾಗುವ ಸಾಕಷ್ಟು ದೃಶ್ಯಗಳನ್ನು ಈ ಸಿನಿಮಾದಲ್ಲಿ ತೋರಿಸಲು ಶಿವ ನಿರ್ವಾಣ ಪ್ಲಾನ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಖುಷಿ ಚಿತ್ರದ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್‌ಗೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ವಿಜಯ್ ದೇವರಕೊಂಡ ಹಾಗೂ ಸಮಂತಾ ಅಭಿಮಾನಿಗಳಲ್ಲಿ ಈ ಸಿನಿಮಾದ ಮತ್ತಷ್ಟು ನಿರೀಕ್ಷೆ ಹೆಚ್ಚಾಗಿದೆ.