ಮೇ 1 ರಿಂದ ಲಸಿಕೆ ಮುಕ್ತ ಮಾರಾಟ

ನವದೆಹಲಿ, ಏ.೨೧- ದೇಶದಲ್ಲಿ ಮೇ ತಿಂಗಳ ೧ ರಿಂದ ಮುಕ್ತ ಮಾರುಕಟ್ಟೆಯಲ್ಲಿ ಕೋವಿಡ್ ಲಸಿಕೆಯನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಕೇವಲ ಆಸ್ಪತ್ರೆಗಳು ಮತ್ತು ನೊಂದಾಯಿತ ಲಸಿಕಾ ಕೇಂದ್ರಗಳಲ್ಲಿ ಮಾತ್ರ ಲಸಿಕೆ ಮಾರಾಟಕ್ಕೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ.
ಆದರೆ ಯಾವುದೇ ಕಾರಣಕ್ಕೂ ಮೆಡಿಕಲ್ ಶಾಪ್ ಅಥವಾ ಇನ್ನಿತರ ಕೇಂದ್ರಗಳಲ್ಲಿ ಲಸಿಕೆ ಮಾರಾಟಕ್ಕೆ ಅವಕಾಶ ಮಾಡಿಕೊಡದಿರಲು ನಿರ್ಧರಿಸಿದೆ.
ಆಸ್ಪತ್ರೆಗಳು ಮತ್ತು ನೊಂದಾಯಿತ ಲಸಿಕಾ ಕೇಂದ್ರಗಳಲ್ಲಿ ಕೋರೋನಾ ಸುತ್ತಿನ ಲಸಿಕೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದ್ದರೂ ವೈದ್ಯರ ಶಿಫಾರಸಿನ ಮೇರೆಗೆ ಮಾತ್ರ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಈ ಸಂಬಂಧ ಮುಂದಿನ ಎರಡು ದಿನಗಳಲ್ಲಿ ಕೇಂದ್ರ ಸರ್ಕಾರ ಸೂಕ್ತ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ಸೋಂಕಿನ ಲಸಿಕೆಯನ್ನು ಔಷಧಿ ಅಂಗಡಿಗಳು ಮತ್ತು ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ ಬದಲಾಗಿ ಆಸ್ಪತ್ರೆಗಳು ಮತ್ತು ನೊಂದಾಯಿತ ಲಸಿಕಾ ಕೇಂದ್ರಗಳಲ್ಲಿ ಮಾತ್ರ ಲಭ್ಯವಿರಲಿದೆ .ಈ ಸಂಬಂಧ ಕಾಲಕಾಲಕ್ಕೆ ತನಿಖೆ ಮಾಡಲಾಗುವುದು ಎಂದು ತಿಳಿಸಲಾಗಿದೆ

ಮೇ. ೧ ರಿಂದ ಲಸಿಕೆ:

ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೇ.೧ ರಿಂದ ಹದಿನೆಂಟು ದಾಟಿದ ಎಲ್ಲರಿಗೂ ಲಸಿಕೆ ಹಾಕಲು ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲು ನಿರ್ಧರಿಸಲಾಗಿದೆ .೧೮ ವರ್ಷ ದಾಟಿದ ಎಲ್ಲರೂ ಲಸಿಕೆ ಪಡೆಯುವಂತೆ ಕೇಂದ್ರ ಸರ್ಕಾರ ಸೂಚಿಸಿದೆ