ಮೇ. 10 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ: ಗೋವಿಂದರೆಡ್ಡಿ

ಬೀದರ. ಮೇ. 8:ಮತದಾನಕ್ಕೆ ಇನ್ನು ಕೆಲವೆ ದಿನಗಳು ಬಾಕಿ ಇದ್ದು ಮೇ. 10 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಅವರು ರವಿವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಫ್ ಸಮಿತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೀದರ ಇವರ ಸಹಯೋಗದಲ್ಲಿ ಜಿಲ್ಲಾ ನೆಹರು ಕ್ರೀಡಾಂಗಣದಿಂದ ಅಂಬೇಡ್ಕರ್ ವೃತ್ತದವರೆಗೆ ಹಮ್ಮಿಕೊಂಡಿದ್ದ ಮಾನವ ಸರಪಳಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಸ್ವೀಫ್ ಸಮಿತಿ ಬೀದರ ವತಿಯಿಂದ ಕಳೆದ ಹಲವು ದಿನಗಳಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಈ ಹಿಂದೆ ಮತಗಟ್ಟೆಗಳ ಮೇಲೆ ಮತದಾನ ಧ್ವಜಗಳನ್ನು ಹಾರಿಸುವ ಮೂಲಕ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸಲಾಗಿತ್ತು. ಇಂದು ಮಾನವ ಸರಪಳಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದಕ್ಕೆ ಚಾಲನೆ ನೀಡುತ್ತಿರುವದಕ್ಕೆ ತುಂಬಾ ಸಂತೋಷವಾಗುತ್ತಿದೆ ಎಂದರು.

ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ನಂತರ ಜಿಲ್ಲಾ ಸ್ವೀಫ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಅವರು ಮತದಾನ ಪ್ರತಿಜ್ನಾ ವಿಧಿಯನ್ನು ಬೋಧಿಸಿ ಮಾತನಾಡಿ ಬೀದರ ಜಿಲ್ಲೆಯಲ್ಲಿ ಮತದಾನ ಹೆಚ್ಚಳಕ್ಕಾಗಿ ಹಲವಾರು ಮತದಾನ ಜಾಗೃತಿ ಕಾರ್ಯಕ್ರಮಗಳನ್ಮು ಹಮ್ಮಿಕೊಳ್ಳಲಾಗುತ್ತಿದೆ ಈ ಚುನಾವಣೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮತಗಳನ್ನು ಚಲಾಯಿಸಬೇಕೆಂದರು.

ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಮಾಸ್ಟರ್ ಚುನಾವಣಾ ತರಬೇತಿದಾರ ಗೌತಮ ಅರಳಿ. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುವರ್ಣ. ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸುರೇಖಾ. ಬೀದರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹಾಗೂ ಪದವಿ ಪೂರ್ವ ಶಿಕ್ಷಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು. ಉಪನ್ಯಾಸಕರು. ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.