ಮೇ 10 ರಂದು ಜಾತ್ರೆ ಹಾಗೂ ಸಂತೆ ನಿಷೇಧ

ಕಲಬುರಗಿ,ಮೇ.7: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರಡಿಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಮತದಾನದ ದಿನದಂದು ನಡೆಯುವ ಜಾತ್ರೆ, ದನಗಳ ಸಂತೆ, ಉತ್ಸವಗಳು ಹಾಗೂ ಉರುಸ ಮುಂತಾದವುಗಳನ್ನು ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.