
ಯಾದಗಿರಿ : ಮೇ 05 : ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆವತಿಯಿಂದ ಆಚರಿಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶ್ರೀಮತಿ ಸ್ನೇಹಲ್.ಆರ್ ಅವರು ತಿಳಿಸಿದ್ದಾರೆ.
ಅಂದು ರಾಜ್ಯದಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ, ತಾಲ್ಲೂಕು ಮಟ್ಟದ ಎಲ್ಲಾ ಕಚೇರಿಗಳಲ್ಲಿ ಮತ್ತು ತಾಲ್ಲೂಕು, ಗ್ರಾಮ ಪಂಚಾಯತಗಳಲ್ಲಿ ಹಾಗೂ ಎಲ್ಲಾ ಶಾಲಾ ಕಾಲೇಜು, ಅನುದಾನಿತ ಶಾಲಾ ಕಾಲೇಜುಗಳಲ್ಲಿ ತಮ್ಮ ಅಧೀನ ಕಾರ್ಯಾಲಯದಲ್ಲಿ ಕಡ್ಡಾಯವಾಗಿ 2023ರ ಮೇ 10 ರಂದು ಈ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸುವಂತೆ ಸೂಕ್ತ ಕ್ರಮ ವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.