ಮೇ 10 ರಿಂದ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಎರಡನೇ ಹಂತದ ನೀರು ಬಿಡುಗಡೆ

filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.29490742, 0.58800006);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;

ಸಂಜೆವಾಣಿ ವಾರ್ತೆ

ಚಿತ್ರದುರ್ಗ.ಮೇ.೯;ಬರಗಾಲದ ಹಿನ್ನಲೆಯಲ್ಲಿ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ವಿವಿ ಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಇದೇ ಮೇ 10 ರಿಂದ 25 ದಿನಗಳ ಕಾಲ ವಾಣಿ ವಿಲಾಸ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಬೇಸಿಗೆ ಹಂಗಾಮಿಗೆ ಎರಡನೇ ಹಂತದ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಯಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ವಿ.ವಿ.ಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.ವಾಣಿವಿಲಾಸ ಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ 2023-24ನೇ ಸಾಲಿನಲ್ಲಿ ಅತೀ ಕಡಿಮೆ ಮಳೆಯಾಗಿರುವುದರಿಂದ, ರೈತರ ಜಮೀನುಗಳಿಗೆ ನೀರು ಹರಿಸುವುದು ಅವಶ್ಯವಿರುತ್ತದೆ. ಈ ಹಿನ್ನಲೆಯಲ್ಲಿ ವಾಣಿವಿಲಾಸ ಸಾಗರ ಜಲಾಶಯ ಅಚ್ಚುಕಟ್ಟು ಪ್ರದೇಶಕ್ಕೆ ಬೇಸಿಗೆ ಹಂಗಾಮಿಗೆ ಎರಡನೇ ಹಂತದ ನೀರು ಬಿಡುಗಡೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಬರಗಾಲ ಹಾಗೂ ಬೇಸಿಗೆಯ ಈ ಸಂದರ್ಭದಲ್ಲಿ ವಿವಿ ಸಾಗರ ಅಚ್ಚುಕಟ್ಟು ಪ್ರದೇಶದ ರೈತರು ಮುತುವರ್ಜಿವಹಿಸಿ ನೀರು ಸದ್ಭಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರು ವ್ಯರ್ಥ ಮಾಡಬಾರದು. ಎಲ್ಲಿ ಅಗತ್ಯ ಹಾಗೂ ಅನಿವಾರ್ಯ ಇರುವ ಕಡೆ ಮಾತ್ರ ನೀರು ಬಳಕೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಬೀಳು ಭೂಮಿಗೆ ಅನಾವಶ್ಯಕವಾಗಿ ನೀರು ಹರಿಸಬಾರದು. ಅನಾವಶ್ಯಕವಾಗಿ ನೀರು ವ್ಯರ್ಥ ಮಾಡುವುದು ಕಂಡು ಬಂದರೆ ನೀರು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ ಅವರು, ಟ್ಯಾಂಕರ್ ಮೂಲಕ ವಾಣಿಜ್ಯ ಉದ್ದೇಶಕ್ಕಾಗಿ ನೀರು ಮಾರಾಟ ಮಾಡಬಾರದು. ಒಂದು ವೇಳೆ ವಾಣಿಜ್ಯ ಬಳಕೆಗಾಗಿ ನೀರು ಬಳಕೆ ಮಾಡುವುದು ಕಂಡು ಬಂದರೆ ಸಂಬAಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.ನೀರು ಹರಿಸುವ ಮುನ್ನ ಅಚ್ಚುಕಟ್ಟು ಪ್ರದೇಶದಲ್ಲಿನ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಹಾಗೂ ನೀರು ಹರಿಸಿದ ನಂತರದ ನೀರಿನ ಮಟ್ಟದ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸಮೀಕ್ಷೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.