
ಕಲಬುರಗಿ,ಮೇ.12:ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಇದೇ ಮೇ 13 ರಂದು ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿದೆ. ಮತಎಣಿಕೆ ಕಾರ್ಯವನ್ನು ಸುಗಮವಾಗಿ ನಡೆಸಲು ಹಾಗೂ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲೆಯಾದ್ಯಂತ (ಕಲಬುರಗಿ ನಗರಕ್ಕೆ ನಗರ ಪೊಲೀಸ್ ಆಯುಕ್ತರು ಕಲಂ 144ರಡಿ ಆದೇಶ ಹೊರಡಿಸಿರುವುದರಿಂದ ಕಲಬುರಗಿ ನಗರ ಹೊರತುಪಡಿಸಿ) ಇದೇ ಮೇ 13 ರ ಬೆಳಿಗಿನ 6 ಗಂಟೆಯಿಂದ ಮೇ 14ರ ಬೆಳಗಿನ 6 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ-1973ರ ಕಲಂ 144 ರನ್ವಯ ಕೆಲವೊಂದು ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಾದ್ಯಂತ ಮೆರವಣಿಗೆ ಅಥವಾ 5 ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ಓಡಾಡುವುದನ್ನು ನಿμÉೀಧಿಸಿದೆ. ಇದಲ್ಲದೇ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು, ಕಲ್ಲು, ಇಲ್ಲವೇ ಸ್ಪೋಟಕ ವಸ್ತುಗಳು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಸಹ ನಿμÉೀಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿμÉೀಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಇದಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುತ್ತದೆ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಪ್ರತಿಬಂಧಾಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು/ನಿಯಮಗಳನ್ನು ಪಾಲಿಸಬೇಕು.
ಈ ಆದೇಶ ಉಲ್ಲಂಘಿಸಿದ್ದಲ್ಲಿ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಹಾಗೂ ಅನ್ವಯಿಸುವ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಕೈಗೊಳ್ಳಲಾಗುವುದು. ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕೆಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.