ಮೇ.15ಕ್ಕೆ ಆಡಳಿತ ತಜ್ಞ ಬಿ.ಜಿ.ದಾಸೇಗೌಡ ಕೃತಿ ಬಿಡುಗಡೆ

ಸಂಜೆವಾಣಿ ವಾರ್ತೆ
ಮಂಡ್ಯ: ಕರ್ನಾಟಕ ಸಂಘ ಹಾಗೂ ಬಿ.ಜಿ.ದಾಸೇಗೌಡರ ಕುಟುಂಬ ವರ್ಗದ ವತಿಯಿಂದ ಆಡಳಿತ ತಜ್ಞ ಬಿ.ಜಿ.ದಾಸೇಗೌಡ ಕೃತಿ ಬಿಡುಗಡೆ ಸಮಾರಂಭ ಮೇ.15ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪೆÇ್ರ.ಬಿ.ಜಯಪ್ರಕಾಶ್ ಗೌಡ ತಿಳಿಸಿದರು .
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ,ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯ ಹಾಗೂ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಪುಸ್ತಕವನ್ನು ಬಿಡುಗಡೆ ಮಾಡಲಿದ್ದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಕೃತಿ ಹಾಗೂ ಬಿ.ಜಿ.ದಾಸೇಗೌಡರ ಕುರಿತು ಮಾತನಾಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮೈಶುಗರ್ ಕಂಪನಿಯ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಬಿ.ಮೋಹನ್ ದಾಸ್, ರೈತ ಮುಖಂಡ ಕೆ ಬೋರೆಯ್ಯ,ಕೃತಿಯ ಕರ್ತೃ ಚಂದಗಾಲು ಪಿ.ಲೋಕೇಶ್ ಉಪಸ್ಥಿತರಿರಲಿದ್ದಾರೆ ಎಂದರು.
ಮಾಜಿ ಶಾಸಕ ಜಿ.ಬಿ.ಶಿವಕುಮಾರ್ ಮಾತನಾಡಿ ಕೋಲ್ಮನ್ ಮತ್ತು ಸರ್. ಎಂ.ವಿಶ್ವೇಶ್ವರಯ್ಯ ಅವರ ಶ್ರಮದಿಂದ ಇಡೀ ಏಷ್ಯಾ ಖಂಡದಲ್ಲಿಯೇ ಸರ್ಕಾರಿ ಸ್ವಾಮ್ಯದಲ್ಲಿ ಮೈಶುಗರ್ ಕಾರ್ಖಾನೆಯನ್ನು ತೆರೆಯಲಾಯಿತು.ಬಿಜಿ ದಾಸೇಗೌಡರು ಕಂಪನಿಯಲ್ಲಿ ಅಧಿಕಾರಿಯಾಗಿ ಕಾರ್ಖಾನೆಯ ಯಶಸ್ವಿಗೆ ಶ್ರಮ ಹಾಕಿದ್ದಾರೆ.ಶಿಸ್ತಿಗೆ ಮತ್ತೊಂದು ಹೆಸರೇ ದಾಸೇಗೌಡರು ಎಂದರು ಗೋಷ್ಠಿಯಲ್ಲಿ ರೈತ ಮುಖಂಡ ಕೆ. ಬೋರಯ್ಯ,ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ,ನಗರಸಭಾ ಸದಸ್ಯ ಮಂಜುಳಾ ಉದಯಶಂಕರ್,ಚಂದಗಾಲು ಲೋಕೇಶ್ ,ನಿವೃತ್ತ ಮೆಕಾನಿಕಲ್ ಇಂಜಿನಿಯರ್ ಗಿರಿದಾಸ್, ಹನಕೆರೆ ನಾಗಪ್ಪ ಉಪಸ್ಥಿತರಿದ್ದರು.