ಮೇ 18 ವಾಕಾಥಾನ್

ಕೆ.ಆರ್.ಪುರ, ಮೇ.೧೪- ನಗರದಲ್ಲಿ ನೀರಿನ ಬವಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೀರಿನ ಉಳಿವು ಹಾಗೂ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಶಾಂತಕೃಷ್ಣಮೂರ್ತಿ ಫೌಂಡೇಶನ್ ವತಿಯಿಂದ ಕ್ಷೇತ್ರದ ರಾಮಮೂರ್ತಿನಗರದಲ್ಲಿ ಜಾಗೃತಿಗಾಗಿ ಇದೇ ೧೮ರಂದು ವಾಕಥಾನ್ ಏರ್ಪಡಿಸಲಾಗಿದೆ.
ಫೌಂಡೇಶನ್ ಅಧ್ಯಕ್ಷೆ ಶಾಂತ ಕೃಷ್ಣಮೂರ್ತಿ ಅವರು ಮಾತನಾಡಿ ನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನ ವ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಐದು ಕಿಲೋಮೀಟರ್ ವಾಕಥಾನ್ ಏರ್ಪಡಿಸಲಾಗಿದೆ ಎಂದು ನುಡಿದರು.
ವಾಕಥಾನ್ ಗೆ ಶಾಸಕ ಬಿ.ಎ.ಬಸವರಾಜ ಅವರು ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಲಿದ್ದು ನೂರಾರು ಮಂದಿ ನಾಗರೀಕರು ಭಾಗವಹಿಸಲಿದ್ದಾರೆ ಎಂದು ನುಡಿದರು.
ಮಳೆ ನೀರು ಕೊಯ್ಲು ,ಇಂಗುಗುಂಡಿಗಳ ಹೆಚ್ಚಳ ಸೇರಿದಂತೆ ಅಂತರ್ಜಲ ವೃದ್ಧಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಈ ವಾಕಥಾನ್ ನಲ್ಲಿ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಫೌಂಡೇಶನ್ ಸಂಸ್ಥಾಪಕ ಸದಸ್ಯ ಕೃಷ್ಣಮೂರ್ತಿ, ಮುಖಂಡರಾದ ಆನಂದ್,ಪೃಥ್ವಿ, ಸುಬ್ರಹ್ಮಣಿ,ಮೈಕಲ್,ಸತೀಶ್,ಹಿರೇಗೌಡ ಇದ್ದರು.